ಮಾಣಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

0

ವಿಟ್ಲ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಪ್ರಾಯೋಜಿತ ಯಕ್ಷ ಶಿಕ್ಷಣ ನಾಟ್ಯ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ ಸರಕಾರಿ ಪ್ರೌಢಶಾಲೆ ಮಾಣಿಲದಲ್ಲಿ ನಡೆಯಿತು.

ಯಕ್ಷ ಧ್ರುವ ಪಟ್ಲ ಫೌಂಡೇಶನ್, ವಿಟ್ಲ ಘಟಕದ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶಿವಪ್ರಸಾದ್ ಸೊರಂಪಳ್ಳ ವಹಿಸಿದರು. ಯಕ್ಷ ಧ್ರುವ ಪಟ್ಲ ಫೌಂಡೇಶನ್, ವಿಟ್ಲ ಘಟಕದ ಪ್ರಧಾನ ಕಾರ್ಯದರ್ಶಿ ಪೂವಪ್ಪ ಶೆಟ್ಟಿ ಅಳಿಕೆ, ಮಾಣಿಲ ಗ್ರಾಪಂ ಸದಸ್ಯರಾದ ರಾಜೇಶ್ ಕುಮಾರ್ ಬಾಳೆಕಲ್ಲು, ಎಸ್ ಡಿ ಎಂ ಸಿ ಸದಸ್ಯರಾದ ವಿಷ್ಣು ಕನ್ನಡಗುಳಿ,‌ ಪಟ್ಲ ಫೌಂಡೇಶನ್ ನ ಸಂಘಟನಾ ಕಾರ್ಯದರ್ಶಿ ಭಾಸ್ಕರ ಶೆಟ್ಟಿ , ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಉಮಾನಾಥ ರೈ ಮೇರಾವು ಮೊದಲಾದವರು ಉಪಸ್ಥಿತರಿದ್ದರು.
ಯಕ್ಷ ಗುರು ಗಣೇಶ್ ಕೊಂದಲಕೋಡಿ ಪ್ರಶಿಕ್ಷಣಾರ್ಥಿಗಳಿಗೆ ಸಾಂಕೇತಿಕವಾಗಿ ಮೊದಲ ತರಬೇತಿ ನಡೆಸಿದರು. ಮುಖ್ಯಶಿಕ್ಷಕಿ ಲತಾ ಯು. ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.
ಕನ್ನಡ ಭಾಷಾ ಶಿಕ್ಷಕ ಸುಧೀಶ್ ಕೆ. ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಉಮಾನಾಥ ರೈ ಮೇರಾವು ವಂದಿಸಿದರು.

LEAVE A REPLY

Please enter your comment!
Please enter your name here