ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ

0

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ಜು.1ರಂದು 2024-25ರ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ವಿವಿಧ ಹುದ್ದೆಗಳಿಗೆ ಕಾಲೇಜು ಹಂತದ ಚುನಾವಣೆಯು ನಡೆಯಿತು. ವಿದ್ಯಾರ್ಥಿ ನಾಯಕನಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಯಶ್ವಿತ್ ಕೆ, ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅಫ್ರಾ ಹಾಗೂ ಕ್ರೀಡಾ ಹಾಗೂ ಸಾಂಸ್ಕೃತಿಕ ನಾಯಕನಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಯಶ್ವಿನ್ ಯು ಆಯ್ಕೆಯಾಗಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಎಚ್ ಕೆ ಪ್ರಕಾಶ್ ಇವರು ಮುಖ್ಯ ಚುನಾವಣಾ ಆಯುಕ್ತರಾಗಿ ಮಾರ್ಗದರ್ಶನ ನೀಡಿದರು ಹಾಗೂ ಕಾರ್ಯಕ್ರಮವನ್ನು ಗಣಕಶಾಸ್ತ್ರ ಉಪನ್ಯಾಸಕರಾದ ವಿಘ್ನೇಶ್‌ ಎಚ್‌ ನಿರೂಪಿಸಿದರು.

LEAVE A REPLY

Please enter your comment!
Please enter your name here