ಪುತ್ತೂರು: ನಮ್ಮ ರಾಜ್ಯದಲ್ಲಿ ರಸ್ತೆ ಅಪಘಾತದಿಂದ ಸಾವು ನೋವುಗಳು ದಿನದಿಂದ ದಿನಕ್ಕೆ ಹೆಚ್ಚುತಿದ್ದು ಅದರಲ್ಲೂ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಕ, ಯುವತಿಯರು ದೊಡ್ಡ ಸಂಖ್ಯೆಯಲ್ಲಿ ಅಪಘಾತಕ್ಕೀಡಾಗುತ್ತಿದ್ದಾರೆ.ಯುವ ಭವಿಷ್ಯಕ್ಕೆ ಎಚ್ಚರಿಕೆಯ ದೃಷ್ಟಿ, ಜಾಗೃತಿಯ ದೃಷ್ಟಿಯಲ್ಲಿ ಶಾಲಾ ವಿದ್ಯಾರ್ಥಿಗಳ ಪ್ರೌಢ ಶಿಕ್ಷಣದಲ್ಲಿ ರಸ್ತೆ ಸುರಕ್ಷತೆ ಮತ್ತು ಜಾಗೃತಿ ಅಧ್ಯಯನವನ್ನು ಪಠ್ಯ ಕ್ರಮವಾಗಿ ಅಳವಡಿಸಿಕೊಳ್ಳಬೇಕು ಎಂದು ರೋಟರಿ ರಸ್ತೆ ಸುರಕ್ಷಾ ಜಾಗೃತಿ ಜಿಲ್ಲಾ ಚೈರ್‌ಮ್ಯಾನ್ ಮತ್ತು ಇಂಡಿಯನ್ ರೋಡ್ಸ್ ಕಾಂಗ್ರೆಸ್ ಇದರ ತಾಂತ್ರಿಕ ಸಲಹೆಗಾರ ಹರ್ಷ ಕುಮಾರ್ ರೈ ಮಾಡಾವು ಇತ್ತೀಚೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿಯಾಗಿ ಚರ್ಚಿಸಿ ಶಿಕ್ಷಣ ಇಲಾಖೆಗೆ ಈ ಬಗ್ಗೆ ಶಿಫಾರಸು ಮಾಡುವಂತೆ ವಿನಂತಿಸಿಕೊಂಡಿದ್ದರು.
ಇದಲ್ಲದೆ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಮುಂದಿನ ಶೈಕ್ಷಣಿಕ ವರ್ಷದಿಂದ ರಸ್ತೆ ಸುರಕ್ಷತೆ ಮತ್ತು ಜಾಗೃತಿಯ ಬಗ್ಗೆ ಅಧ್ಯಯನ ಪಠ್ಯ ಕ್ರಮವನ್ನು ಪ್ರೌಢ ಶಾಲಾ ಶಿಕ್ಷಣದಲ್ಲಿ ಜಾರಿಗಾಗಿ ಒತ್ತಡ ತರಲು ವಿನಂತಿಸಿದರು.