ಬಂಟ್ವಾಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾದ ‘ದಶಲಕ್ಷ ಗಿಡಗಳ ನಾಟಿ’ ಕಾರ್ಯಕ್ರಮಕ್ಕೆ ಬಂಟ್ವಾಳ ತಾಲೂಕಿನ ಆಲಂಪುರಿಯ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಚಾಲನೆ ನೀಡಲಾಯಿತು.ಇದೇ ಸಂದರ್ಭ ಪುತ್ತೂರಿನ ಪ್ರಗತಿಪರ ಕೃಷಿಕ ಅವಿನಾಶ ಕೊಡಂಕಿರಿಯವರಿಗೆ ‘ಅರಣ್ಯ ಮಿತ್ರ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯ ಅರಣ್ಯ,ಜೀವಿಶಾಸ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ.ಖಂಡ್ರೆ ಅವರು ಮಾತನಾಡಿ,ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆ ಇಡೀ ಜಗತ್ತಿಗೆ ಸವಾಲಾಗಿರುವ ಈ ಕಾಲಘಟ್ಟದಲ್ಲಿ ಪರಿಸರ ಸಂರಕ್ಷಣೆ ಮಾತ್ರ ಸಮೃದ್ಧ ಬದುಕಿಗೆ ಸೋಪಾನವಾಗುತ್ತದೆ ಎಂದು ಹೇಳಿದರು.ಮಾನವ ಪ್ರಾಣಿ ಸಂಘರ್ಷ ಹೆಚ್ಚಾಗುತ್ತಿದ್ದು ಅಭಿವೃದ್ಧಿಯ ಜೊತೆಗೆ ನೆಲ, ಜಲ, ಪ್ರಾಣಿ ಮತ್ತು ವನ ಸಂರಕ್ಷಣೆಯ ಕಾಳಜಿಯ ಸುಸ್ಥಿರ ಅಭಿವೃದ್ಧಿ ನಮ್ಮ ಸಂಕಲ್ಪವಾಗಬೇಕು ಎಂದೂ ಖಂಡ್ರೆ ಹೇಳಿದರು.
ಪರಿಸರ ದಿನ, ವನಮಹೋತ್ಸವದ ದಿನದಂದು ಮಾತ್ರ ಸಸಿ ನೆಟ್ಟು, ನಮ್ಮ ಪರಿಸರ ಪ್ರೇಮ ಮೆರೆದರೆ ಸಾಲದು, ಅದು ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಬೇಕು.ಪ್ರತಿಯೊಬ್ಬರೂ ತಮ್ಮ ಮನೆಯ ಮುಂದೆ ಒಂದು ಗಿಡವಾದರೂ ನೆಟ್ಟು ಪೋಷಿಸಬೇಕು ಎಂದು ಈಶ್ವರ ಖಂಡ್ರೆ ಹೇಳಿದರು.ಕಳೆದ ಕೆಲವು ತಿಂಗಳುಗಳಲ್ಲಿ ಇಡೀ ಜಗತ್ತು ಬಿರು ಬಿಸಿಲಿನ ತಾಪದಿಂದ ತತ್ತರಿಸಿ ಹೋಯಿತು.ಭಾರತದಲ್ಲಿ ಈ ಬಾರಿ 40 ಸಾವಿರಕ್ಕೂ ಹೆಚ್ಚು ಜನರು ಸೌರಾಘಾತಕ್ಕೆ ಈಡಾಗಿದ್ದು, 100ಕ್ಕೂ ಹೆಚ್ಚು ಸಾವು ಸಂಭವಿಸಿವೆ.ಹಜ್ ಯಾತ್ರೆಗೆ ಹೋದ ಸಾವಿರಕ್ಕೂ ಹೆಚ್ಚು ಜನರು ಸೌರಶಾಖ ತಾಳಲಾರದೆ ನರಳಿ ಮೃತಪಟ್ಟಿದ್ದನ್ನು ನಾವು ಮಾಧ್ಯಮಗಳಲ್ಲಿ ನೋಡಿದ್ದೇವೆ.ತಾಪಮಾನ ಏರಿಕೆ ತಡೆಯಲು ವೃಕ್ಷ ಸಂರಕ್ಷಣೆಯೇ ಪರಿಹಾರ ಎಂದ ಸಚಿವರು, ನಮ್ಮ ಪೂರ್ವಿಕರು ನೈಸರ್ಗಿಕ ಸಂಪನ್ಮೂಲವನ್ನು ಹಿತಮಿತವಾಗಿ ಬಳಸುತ್ತಿದ್ದರು.ಬೆಟ್ಟ, ಗುಡ್ಡ, ನದಿ ಪೂಜಿಸುತ್ತಿದ್ದರು. ಅವರಿಗೆ ಪರಿಸರದ ಕಾಳಜಿ ಇತ್ತು.ನಾವು ಕೂಡ ಪರಿಸರ ಸಂರಕ್ಷಣೆ ಮಾಡಿ, ಇರುವುದೊಂದೇ ಭೂಮಿಯನ್ನು ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಿರ್ವಹಿಸಬೇಕು ಎಂದರು.ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಸಮಾಜಮುಖಿ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಅರಣ್ಯದ ಬಳಿ, ಅರಣ್ಯದಲ್ಲಿ ಪಶು ಪಕ್ಷಿಗಳಿಗೆ ಆಹಾರ ನೀಡುವ -ಲ ನೀಡುವ ವೃಕ್ಷ ನಾಟಿ ಮಾಡುವ ಈ ಯೋಜನೆ -ಲಪ್ರದ ಕಾರ್ಯಕ್ರಮ ಎಂದು ಬಣ್ಣಿಸಿದರು.
ಇರುವ ವೃಕ್ಷಗಳ ಸಂರಕ್ಷಣೆಯನ್ನೂ ಮಾಡಬೇಕು-ಡಾ|ಹೆಗ್ಗಡೆ:
ಅಧ್ಯಕ್ಷತೆ ವಹಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಽಕಾರಿ,ರಾಜ್ಯ ಸಭಾ ಸಂಸದ ಡಾ|ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಹೊಸ ಸಸಿ ನೆಡುವುದರ ಜೊತೆಗೆ ಇರುವ ವೃಕ್ಷಗಳ ಸಂರಕ್ಷಣೆಯನ್ನೂ ನಾವು ಮಾಡಬೇಕು.ಆಗ ಮಾತ್ರ ಹಸಿರು ಉಳಿಸಲು ಸಾಧ್ಯ.ಈ ಭೂಮಿ ನಮ್ಮದಲ್ಲ.ಮುಂದಿನ ತಲೆಮಾರಿಗಾಗಿ ಇದನ್ನು ಕಾಪಾಡುವ ಹೊಣೆ ಹೊರಬೇಕು ಎಂದು ಹೇಳಿದರು.
ಉತ್ತಮ ಭವಿಷ್ಯಕ್ಕೆ ಪರಿಸರ ಸಂರಕ್ಷಣೆಯ ಅಗತ್ಯವಿದೆ-ರಮಾನಾಥ ರೈ:
ಪುತ್ತೂರಿನ ಪ್ರಗತಿಪರ ಕೃಷಿಕ,ನರಿಮೊಗರು ಸರಸ್ವತಿ ಶಾಲೆಯ ಸ್ಥಾಪಕ ಅವಿನಾಶ್ ಕೊಡಂಕಿರಿಯವರಿಗೆ ‘ಅರಣ್ಯ ಮಿತ್ರ ಪ್ರಶಸ್ತಿ’ಪ್ರದಾನ ಮಾಡಲಾಯಿತು.ಪ್ರಶಸ್ತಿ ಪ್ರದಾನ ಮಾಡಿದ ರಾಜ್ಯ ಅರಣ್ಯ ಖಾತೆಯ ಮಾಜಿ ಸಚಿವ ರಮಾನಾಥ ರೈಯವರು ಮಾತನಾಡಿ, ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಸರ್ಕಾರ ತಾಲೂಕಿಗೊಂದು ಸಸ್ಯೋದ್ಯಾನ ನಿರ್ಮಿಸುವ ಸಂಕಲ್ಪ ತೊಟ್ಟಿದೆ, ಉತ್ತಮ ಭವಿಷ್ಯಕ್ಕೆ ಪರಿಸರ ಸಂರಕ್ಷಣೆಯ ಅಗತ್ಯ ಇದೆ ಎಂದರು.
ಗ್ರಾಮಗಳು ಸ್ವಚ್ಛತೆ, ಸಮೃದ್ಧಿ ವಿಚಾರದಲ್ಲಿ ಸ್ವಾವಲಂಬಿಗಳಾಗಬೇಕು -ರಾಜೇಶ್ ನಾಯ್ಕ್ :
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಸಸಿ ವಿತರಣೆ ಮಾಡಿ ಮಾತನಾಡಿ, ಪ್ರತೀ ಗ್ರಾಮಗಳು ಸ್ವಚ್ಛತೆ, ಸಮೃದ್ಧಿ ವಿಚಾರದಲ್ಲಿ ಸ್ವಾವಲಂಬಿಗಳಾದಾಗ ಗಾಂಽಜಿ ಕಂಡ ನಿಜವಾದ ರಾಮರಾಜ್ಯದ ಕನಸು ನನಸಾಗಲು ಸಾಧ್ಯ ಎಂದರು.ಕಾರ್ಯಕ್ರಮದಲ್ಲಿ ವಗ್ಗ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಲಾವನ ನಿರ್ಮಾಣಕ್ಕೆ,ಕಾರಿಂಜೇಶ್ವರ ದೇವಸ್ಥಾನದ ದೇವ ವನ, ರುದ್ರಭೂಮಿ ವನ, ಪೊಳಲಿ ಕೆರೆಗಳಲ್ಲಿ ಗಿಡನಾಟಿ, ಸಾಲುಮರ ನಾಟಿ, ವಾಣಿಜ್ಯ ಕಾಡು, ಶೌರ್ಯ ವನ ನಿರ್ಮಾಣದ ಗಿಡಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.
ನಂತರ ಅರಣ್ಯ ಸಚಿವ ಈಶ್ವರ ಖಂಡ್ರೆ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ವೀಕ್ಷಿಸಿ, ಅಲ್ಲಿರುವ ವೃಕ್ಷಗಳ ಮಾಹಿತಿ ಪಡೆದರು.ಸಸ್ಯೋದ್ಯಾನಗಳಿಗೆ ಬರುವ ಮಕ್ಕಳಿಗೆ, ಜನರಿಗೆ ಕನಿಷ್ಠ 10 ಗಿಡ ಮರಗಳನ್ನು ಗುರುತಿಸುವಂತೆ ಮಾಹಿತಿ ನೀಡಿ ಎಂದು ಸಲಹೆ ನೀಡಿದರು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಂಗಳೂರು ವೃತ್ತದ ಸಿಎಫ್ ಡಾ|ವಿ.ಕರಿಕಾಲನ್, ಕಮಲಾ ಕರಿಕಾಲನ್, ಮಂಗಳೂರು ವಿಭಾಗದ ಡಿ.ಸಿ.ಎ- ಅಂಟೋನಿ ಮರಿಯಪ್ಪ ವೈ.ಕೆ., ಮಂಗಳೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಽಕಾರಿ ಶ್ರೀಧರ್, ಕಾವಳಪಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಬಂಟ್ವಾಳ ವಲಯ ಅರಣ್ಯ ಅಧಿಕಾರಿ ಪ್ರಜ್ವಲ್ ಶೆಟ್ಟಿ, ಸ್ಥಳೀಯ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ಅನಿಲ್ ಕುಮಾರ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ಬಂಟ್ವಾಳ ತಾಲೂಕು ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಬಾಲಕೃಷ್ಣ ವಂದಿಸಿದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿ.ಪಾಯ್ಸ್, ಗಣೇಶ್ ಪಿ.ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.
ಅವಿನಾಶ್ ಕೊಡಂಕಿರಿಯವರಿಗೆ
ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ
ಪುತ್ತೂರಿನ ಪ್ರಗತಿಪರ ಕೃಷಿಕ,ನರಿಮೊಗರು ಸರಸ್ವತಿ ಶಾಲೆಯ ಸ್ಥಾಪಕ ಅವಿನಾಶ್ ಕೊಡಂಕಿರಿಯವರಿಗೆ ‘ಅರಣ್ಯ ಮಿತ್ರ ಪ್ರಶಸ್ತಿ’ಪ್ರದಾನ ಮಾಡಲಾಯಿತು.ರಾಜ್ಯ ಅರಣ್ಯ ಖಾತೆ ಮಾಜಿ ಸಚಿವ ಬಿ.ರಮಾನಾಥ ರೈಯವರು ಪ್ರಶಸ್ತಿ ಪ್ರದಾನ ಮಾಡಿದರು.