ಶಾಸಕರಿಂದ ಅಂಗನವಾಡಿ ಕಾರ್ಯಕರ್ತೆಯರ ಸೇವಾಂಜಲಿ ಟ್ರಸ್ಟ್‌ಗೆ ರೂ.50 ಸಾವಿರ ಸಹಾಯಧನ

0

ಪುತ್ತೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸೇವಾಂಜಲಿ ಟ್ರಸ್ಟ್ ಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರೂ. 50 ಸಾವಿರ ಸಹಾಯಧನವನ್ನು ನೀಡಿದರು. ಮಂಗಳೂರು ಕೇಂದ್ರ ಕಚೇರಿಯನ್ನು ಹೊಂದಿರುವ ಈ ಟ್ರಸ್ಟ್ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ಟ್ರಸ್ಟ್‌ನಲ್ಲಿ ಸದಸ್ಯರಾಗಿರುತ್ತಾರೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ಷೇಮಾಭಿವೃದ್ದಿ ಟ್ರಸ್ಟ್ ಇದಾಗಿರುತ್ತದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಜಿಲ್ಲಾಧ್ಯಕ್ಷೆ ತಾರಾಬಲ್ಲಾಲ್, ಪುತ್ತೂರು ತಾಲೂಕು ಅಧ್ಯಕ್ಷೆ ಕಮಲ, ತಾಲೂಕು ಕಾರ್ಯದರ್ಶಿ ಪುಷ್ಪಾವತಿ, ಸೇವಾಂಜಲಿ ಟ್ರಸ್ಟ್ ಉಪಾಧ್ಯಕ್ಷೆ ಅರುಣಾ ಡಿ, ನಿರ್ದೇಶಕಿ ಮೀನಾಕ್ಷಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here