ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ

0

ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ- ಅಶೋಕ್ ರೈ ಮನವಿ


ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.


ಒಟ್ಟು 34 ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕ ಮರಣಾವಾದರೆ ರೂ 1 ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ 5 ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು 3000 ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸಿದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.


ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here