ಪುತ್ತೂರಿಗೆ ಮೆಡಿಕಲ್‌ ಕಾಲೇಜು ಮತ್ತು ಕ್ಷೇತ್ರಾಭಿವೃದ್ಧಿಗೆ ಹೆಚ್ಚು ಅನುದಾನ- ಸಿಎಂ ಸಿದ್ಧರಾಮಯ್ಯರಿಗೆ ಶಾಸಕ ಅಶೋಕ್‌ ಕುಮಾರ್‌ ರೈ ಮನವಿ

0


ಪುತ್ತೂರು:ಪುತ್ತೂರಿಗೆ ಮೆಡಿಕಲ್‌ ಕಾಲೇಜು ಮಂಜೂರು ಮಾಡುವಂತೆ ಮತ್ತು ಕ್ಷೇತ್ರದ ಅಭಿವೃದ್ದಿ ಕಾರ್ಯಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್‌ ಕುಮಾರ್‌ ರೈಯವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಜು.3ರಂದು ಬೆಂಗಳೂರಿನಲ್ಲಿರುವ ಸಿ. ಎಂ‌ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.


ಸುಮಾರು‌ ಅರ್ಧ ಗಂಟೆಗಳ ಕಾಲ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕು‌ ಎಂಬುದು‌ ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸು‌ ಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು. ಕಾಲೇಜು‌ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಗಮನಕ್ಕೆ ತಂದರು.

ಹೆಚ್ಚು‌ ಅನುದಾನ ಕೊಡಿ
ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನು‌ನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರು‌ ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here