ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಪ್ರವೇಶೋತ್ಸವ

0

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ನೆಲ್ಯಾಡಿ ಇಲ್ಲಿಗೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪ್ರವೇಶೋತ್ಸವವನ್ನು ಜೂ.3ರಂದು ಆಚರಿಸಲಾಯಿತು.

ನೂತನ ವಿದ್ಯಾರ್ಥಿಗಳಿಂದ ಹಾಗೂ ಅವರ ಪೋಷಕರಿಂದ ಘೃತ ಆಹುತಿ ನಡೆಸಿ ಅವರನ್ನು ಶಾಲೆಗೆ ಆರತಿ ಬೆಳಗಿ, ಹಣೆಗೆ ತಿಲಕ ಧಾರಣೆ ಹಾಗೂ ಸಿಹಿಯನ್ನು ನೀಡಿ ವಿಶೇಷ ರೀತಿಯಲ್ಲಿ ಬರಮಾಡಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ನಿವೃತ್ತ ಬಿಎಸ್‌ಎಫ್ ಕಮಾಂಡರ್ ಚಂದಪ್ಪ ಮೂಲ್ಯರವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ತಂದೆ ತಾಯಿ, ಶಿಕ್ಷಕರು, ರೈತರು ಹಾಗೂ ಯೋಧರನ್ನು ಗೌರವದಿಂದ ಕಾಣಬೇಕು. ಪ್ರಸ್ತುತ ದಿನಗಳಲ್ಲಿ ನಮ್ಮ ಸನಾತನ ಹಿಂದೂ ಧರ್ಮದ ಸಂಸ್ಕೃತಿ, ಸಂಸ್ಕಾರ, ರಾಷ್ಟ್ರೀಯತೆ, ಆಚರಣೆಗಳನ್ನು ಇನ್ನೂ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶ್ರೀರಾಮ ವಿದ್ಯಾಸಂಸ್ಥೆಗಳು ಶ್ರಮಿಸುತ್ತಿವೆ ಎಂದು ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಮಾತನಾಡಿ, ಮಕ್ಕಳು ಶ್ರೀರಾಮನ ಶಾಂತತೆ, ಧೈರ್ಯ, ಶೌರ್ಯ ಮುಂತಾದ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು. ಶ್ರೀರಾಮ ವಿದ್ಯಾಲಯದ ಆಡಳಿತ ಸಮಿತಿಯ ಅಧ್ಯಕ್ಷ ಡಾ. ಮುರಳೀಧರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾಲಯದ ಕಾರ್ಯದರ್ಶಿ ಮೂಲಚಂದ್ರ ಕಾಂಚನ ಸ್ವಾಗತಿಸಿ, ಮುಖ್ಯಗುರು ಗಣೇಶ್ ವಾಗ್ಲೆ ವಂದಿಸಿದರು. ಭಾಗೀರಥಿ ಮಾತಾಜಿ ನಿರೂಪಿಸಿದರು.

LEAVE A REPLY

Please enter your comment!
Please enter your name here