ಕಬಕ ಸ.ಪ.ಪೂರ್ವ ಕಾಲೇಜಿನಲ್ಲಿ ನಿವೃತ್ತ ಉಪನ್ಯಾಸಕಿ ವನಿತ.ಕೆ ಅಭಿನಂದನಾ ಸಮಾರಂಭ -ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

0

ಕಬಕ: ಕಬಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜೀವಶಾಸ್ತ್ರ ಉಪನ್ಯಾಸಕರಾಗಿ ಸುಮಾರು 37 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿದ ವನಿತ.ಕೆ ಇವರಿಗೆ ಸಂಸ್ಥೆಯ ವತಿಯಿಂದ ಶಾಲು ,ಫಲಪುಷ್ಪ ,ಸ್ಮರಣಿಕೆ ,ಪೇಟ ಇವುಗಳನ್ನು ನೀಡಿ ಸನ್ಮಾನಿಸಲಾಯಿತು.ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ನೆನಪಿನ ಕಾಣಿಕೆ ನೀಡಿದರು.

ಇದೇ ಸಂದರ್ಭದಲ್ಲಿ 2024-25ನೇ ಸಾಲಿನಲ್ಲಿ ಪ್ರವೇಶ ಪಡೆದ ಕಲಾ,ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ಸುಮಾರು 67 ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಶಾಬಾ .ಕೆ ಅಧ್ಯಕ್ಷತೆ ವಹಿಸಿದ್ದರು.ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ರಶೀದ್ ಮುರ ಮತ್ತು ವನಿತ .ಕೆ ಇವರ ಪತಿ ಲಕ್ಮೀಶ ಉಪಸ್ತಿತರಿದ್ದರು.ಪ್ರಾಂಶುಪಾಲ ಶ್ರೀಧರ ರೈ .ಕೆ ಸ್ವಾಗತಿಸಿ, ಉಪನ್ಯಾಸಕಿಯಾದ ಕವನ ಇವರು ಸನ್ಮಾನ ಪತ್ರ ವಾಚಿಸಿದರು.ಉಪನ್ಯಾಸಕಿ ನಯನಕುಮಾರಿ ವಂದಿಸಿದರು.ಉಪನ್ಯಾಸಕ ಶ್ರೀನಿವಾಸ ಬಡೆಕ್ಕಿಲ್ಲಾಯ ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ,ಹಳೆವಿದ್ಯಾರ್ಥಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here