ನೆಲ್ಯಾಡಿ: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಹಾಗೂ ವಿದ್ಯುತ್ ಬಳಕೆದಾರರ ವೇದಿಕೆ ಗೋಳಿತ್ತೊಟ್ಟು ಇದರ ಆಶ್ರಯದಲ್ಲಿ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹ-2024 ಇದರ ಅಂಗವಾಗಿ ವಿದ್ಯುತ್ ಸುರಕ್ಷತೆ ಬಗ್ಗೆ ಜಾಗೃತಿ ಕಾರ್ಯಕ್ರಮ ಜು.3ರಂದು ಗೋಳಿತ್ತೊಟ್ಟು ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.
ಪುತ್ತೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಅವರು ವಿದ್ಯುತ್ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಉಪ್ಪಿನಂಗಡಿ ಶಾಖಾ ಸಹಾಯಕ ಇಂಜಿನಿಯರ್ ನಿತಿನ್‌ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಬಾಬು ಪೂಜಾರಿ ಕಿನ್ಯಡ್ಕ, ಮೆಸ್ಕಾಂ ಉಪ್ಪಿನಂಗಡಿ ಶಾಖಾ ಮೇಲ್ವಿಚಾರಕಿ ಮಿನಿ ಪಿ.ಸಿ.ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲ ಗೌಡ ಕುದ್ಕೋಳಿ, ಗೋಳಿತ್ತೊಟ್ಟು ಬಳಕೆದಾರರ ವೇದಿಕೆ ಅಧ್ಯಕ್ಷ ಸತೀಶ್ ರೈ ಕೊಣಾಲುಗುತ್ತು, ಪ್ರಧಾನ ಕಾರ್ಯದರ್ಶಿ ಕೊರಗಪ್ಪ ಗೌಡ ಕಲ್ಲಡ್ಕ, ಬಳಕೆದಾರರ ವೇದಿಕೆ ಸದಸ್ಯರು, ವಿದ್ಯುತ್ ಬಳಕೆದಾರರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಗೋಳಿತ್ತೊಟ್ಟು ಶಾಲಾ ಮುಖ್ಯಶಿಕ್ಷಕಿ ಜಯಂತಿ ಬಿ.ಎಂ.ಸ್ವಾಗತಿಸಿದರು. ಶಿಕ್ಷಕ ಲತೀಫ್ ಕಾರ್ಯಕ್ರಮ ನಿರೂಪಿಸಿದರು. ಮೆಸ್ಕಾಂ ಪವರ್‌ಮ್ಯಾನ್ ದುರ್ಗಾಸಿಂಗ್ ಸಹಕರಿಸಿದರು.