ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ನಿಷೇಧದಿಂದ ತೊಂದರೆ – ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

0

ಪುತ್ತೂರು: ದೇವಸ್ಯ – ದೇರ್ಲ ಲೋಕೋಪಯೋಗಿ ರಸ್ತೆಯಲ್ಲಿ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕ ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಿಸಿದ್ದರಿಂದಾಗಿ ಒಳಮೊಗ್ರು, ಆರ್ಯಾಪು, ಬೆಟ್ಟಂಪಾಡಿ, ಬಲ್ನಾಡು ಗ್ರಾಮದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗಿದ್ದು ಒಳಮೊಗ್ರು ಗ್ರಾಮದ ಒಂದು ಹಳ್ಳಿ ಸಂಪರ್ಕ ಕಡಿದು ಕೊಂಡಂತಾಗಿದೆ. ಆದ್ದರಿಂದ ಶೀಘ್ರವಾಗಿ ಸಮಸ್ಯೆ ಬಗೆಹರಿಸಿ ಕೊಡುವಂತೆ ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಜು.5ರಂದು ಮನವಿ ಮಾಡಿಕೊಳ್ಳಲಾಗಿದೆ. ಮನವಿ ಸ್ವೀಕರಿಸಿ ಮಾತನಾಡಿದ ಸಂಸದರು ಈ ವಿಚಾರವನ್ನು ಈಗಾಗಲೇ ಆ ಭಾಗದ ಬಿಜೆಪಿ ಪ್ರಮುಖರು ನನ್ನ ಗಮನಕ್ಕೆ ತಂದಿದ್ದು ಈ ಬಗ್ಗೆ ಬದಲಿ ಕ್ರಮವಹಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಜಿಲ್ಲಾಧಿಕಾರಿಯವರೊಂದಿಗೆ ಖುದ್ದು ಮಾತನಾಡಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸುತ್ತೇನೆ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ , ಜಿಲ್ಲಾ ಎಸ್.ಟಿ ಮೋರ್ಛ ಅಧ್ಯಕ್ಷ ಹರೀಶ್ ಬಿಜತ್ರೆ, ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರ ಸಂಚಾಲಕ ರಾಜೇಶ್ ರೈ ಪರ್ಪುಂಜ, ಅಜಿತ್ ರೈ ಹೊಸಮನೆ, ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರದೀಪ್ ಸೇರ್ತಾಜೆ, ಮಹೇಶ್ ರೈ ಕೇರಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here