ಪುತ್ತೂರು: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಎನ್ನುವುದು ಭಾರತದ ಅತಿದೊಡ್ಡ ವಿದ್ಯಾರ್ಥಿ ಸಂಘಟನೆಯಾಗಿದೆ. ಇಂದಿನ ಯುವ ವಿದ್ಯಾರ್ಥಿಗಳು ತಮ್ಮ ಇಚ್ಛಾಶಕ್ತಿ, ಸಂಕಲ್ಪಶಕ್ತಿ, ಕ್ರಿಯಾಶಕ್ತಿಗಳನ್ನು ಉಪಯೋಗಿಸಿಕೊಂಡು, ಸೃಜನಶೀಲತೆಯಿಂದ ಮುಂದುವರಿದು, ತಮ್ಮ ಜವಾಬ್ದಾರಿ ಅರಿತು ವ್ಯಕ್ತಿತ್ವ ವಿಕಸನದ ಜೊತೆಗೆ ರಾಷ್ಟ್ರ ಪುನರ್ ನಿರ್ಮಾಣದ ಕೈಂಕರ್ಯದಲ್ಲಿ ಶ್ರಮಿಸಬೇಕು. ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇದರ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀರಾಮ್ ಅಂಗಿರಸ ಹೇಳಿದರು.
ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನರೇಂದ್ರ ಪ.ಪೂ. ಕಾಲೇಜಿನ ನೂತನ ಘಟಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಘಟಕದ ಅಧ್ಯಕ್ಷರಾಗಿದ್ದ ಚರಣ್ ಇವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಶರತ್ ಮತ್ತು ಕಾರ್ಯದರ್ಶಿಯಾಗಿ ಆಯ್ಕೆಯಾದ ದ್ವಿತೀಯ ವಿಜ್ಞಾನ ವಿಭಾಗದ ಶಿವಕುಮಾರ್ ಇವರಿಗೆ ಎಬಿವಿಪಿಯ ಧ್ವಜವನ್ನು ನೀಡುವ ಮೂಲಕ ಜವಾಬ್ದಾರಿಯನ್ನು ಹಸ್ತಾಂತರಿಸಿದರು. ವೇದಿಕೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಕು. ಯಶಸ್ವಿನಿ ಸ್ವಾಗತಿಸಿ,ಕು. ಶಿವಾನಿ ವಂದಿಸಿದರು.