





ಪುತ್ತೂರು: ಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟ ಪ್ರತಿಷ್ಠಾನ ವಿದ್ಯಾಕುಟೀರ ಬೈಪದವು ಇವರ ನೇತೃತ್ವದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ, ಬನ್ನೂರು ರೈತರ ಸೇವಾ ಸಂಘ ಬನ್ನೂರು, ರೋಟರಿ ಕ್ಲಬ್ ಪುತ್ತೂರು ಸಿಟಿ ಇವರ ಸಹಯೋಗದಲ್ಲಿ ಕೆಎಂಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇವರಿಂದ ಉಚಿತ ವೈದ್ಯಕೀಯ ಶಿಬಿರ ಹಾಗೂ ಕ್ಯಾನ್ಸರ್ ರೋಗ ಮಾಹಿತಿ ಶಿಬಿರವು ಜು.6ರಂದು ಕಬಕ ಗ್ರಾಮದ ಬೈಪದವು ಸಮೀಪದ ವಿದ್ಯಾಕುಟೀರದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ನಡೆಯಲಿದೆ.


ಉಚಿತವಾದ ಈ ವೈದ್ಯಕೀಯ ಶಿಬಿರದಲ್ಲಿ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರು ಭಾಗವಹಿಸಿ ಕ್ಯಾನ್ಸರ್, ಕಿಡ್ನಿ ಮತ್ತು ಮೂತ್ರ ರೋಗ, ಸಾಮಾನ್ಯರೋಗ, ಎಲುಬು, ಕೀಲು ಹಾಗೂ ನೇತ್ರ ತಪಾಸಣೆ ನಡೆಸಲಿದ್ದಾರೆ. ಅಗತ್ಯವಿರುವ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಕನ್ನಡಕ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 9449489226, 9448451242, 9480572649, 9632664279, 9483355101 ನಂಬರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.










