ನಿಡ್ಪಳ್ಳಿ: ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ಜು.19 ರಂದು ನಡೆಯಲಿರುವ ತ್ರಿಕಾಲ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜು.5 ರಂದು ದೇವಸ್ಥಾನದಲ್ಲಿ ನಡೆಯಿತು.

ದೇವಸ್ಥಾನದ ಆಡಳಿತ ಮಂಡಳಿಯ ಗೌರವ ಸಲಹೆಗಾರರಾದ ದಾಮೋದರ ರೈ ಪಡ್ಡಂಬೈಲು ಆನಾಜೆ ಬಿಡುಗಡೆಗೊಳಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾರಾಯಣ ರೈ ಕೊಪ್ಪಳ, ಕಾರ್ಯದರ್ಶಿ ಕುಮಾರ ನರಸಿಂಹ ಬುಳೆನಡ್ಕ, ಸದಸ್ಯರಾದ ಗೋಪಾಲಕೃಷ್ಣ ಭಟ್.ಕೆ, ತಿಮ್ಮಣ್ಣ ರೈ.ಎ, ರಾಮಚಂದ್ರ ಮಣಿಯಾಣಿ, ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ನವೀನ್ ಹೆಬ್ಬಾರ್, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಪದಾಧಿಕಾರಿಗಳು, ನವರಾತ್ರಿ ಉತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ನಾಗೇಶ ಗೌಡ ಸ್ವಾಗತಿಸಿ ವಂದಿಸಿದರು.