ಪುತ್ತೂರು:ನರಿಮೊಗರು ಸರಸ್ವತಿ ವಿದ್ಯಾಮಂದಿರದ ವಿದ್ಯಾರ್ಥಿಗಳಿಗೆ ಮೆಸ್ಕಾಂನಿಂದ ವಿದ್ಯುತ್ ಸುರಕ್ಷತಾ ಮಾಹಿತಿ ಕಾರ್ಯಕ್ರಮವು ಜು.3ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಮೆಸ್ಕಾಂ ಪುತ್ತೂರು ವಿಭಾಗದ ಹಿರಿಯ ಇಂಜಿನಿಯರ್ ಸ್ಮಿತಾ ಮತ್ತು ಕಿರಿಯ ಇಂಜಿನಿಯರ್ ಯೋಗೀಶ್‌ರವರು ವಿದ್ಯುತ್ ಸುರಕ್ಷತೆಯ ಕುರಿತಾದ ಮಾಹಿತಿ ನೀಡಿದರು. ವಿದ್ಯುತ್ ಅವಘಡ ಸಂಭವಿಸಿದಲ್ಲಿ ಏನೆಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಸವಿವರ ಮಾಹಿತಿಯನ್ನು ನೀಡಿದರು. ಶಾಲೆಯ ಸಂಚಾಲಕ ಅವಿನಾಶ್ ಕೊಡಂಕಿರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಶ್ರೀಲಕ್ಷ್ಮಿ ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ನಿರೂಪಿಸಿದರು. ಪವರ್‌ಮೆನ್ ಲೋಕೇಶ್ ಮತ್ತು ಶಾಲಾ ಮುಖ್ಯ ಗುರು ದಿವ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.