ಕಡಬ: ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಹುದ್ದೆ ಖಾಯಂಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

0

ಕಡಬ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಹುದ್ದೆ ಖಾಯಂಗೊಳಿಸುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಲಾಗಿದೆ.


ಕಡಬದಲ್ಲಿ ಜು.6ರಂದು ನಡೆದ ಕಡಬ ತಾಲೂಕು ಮಟ್ಟದ ಜನತಾದರ್ಶನದಲ್ಲಿ ಸಚಿವರನ್ನು ಭೇಟಿ ಮಾಡಿದ ಪುನರ್ವಸತಿ ಕಾರ್ಯಕರ್ತರು ತಾಲೂಕು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ, ವಿಕಲಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹಾಗೂ ವಿಕಲಚೇತನರ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆ ಖಾಯಮಾತಿಗೆ ಸಚಿವರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಸಮಿತಿ ಪದಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿಗೆ ಅವಕಾಶ ಮಾಡಿಕೊಡುವಂತೆಯೂ ಮನವಿಯಲ್ಲಿ ಒತ್ತಾಯಿಸಿದ್ದಾರೆ.


ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ರಾಜ್ಯ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ನಾಯಕ್ ಸುಳ್ಯ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪೆರಾಬೆ ಗ್ರಾಮ ಪಂಚಾಯತ್‌ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಮುತ್ತಪ್ಪ, ಜಿಲ್ಲಾ ಸಮಿತಿಯ ಸದಸ್ಯ ಆಲಂಕಾರು ಗ್ರಾಮ ಪಂಚಾಯತ್‌ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಮೋನಪ್ಪ ಬಿ., ಸವಣೂರು ಗ್ರಾಮ ಪಂಚಾಯತ್‌ನ ದೀಪಿಕಾ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನ ದಿವ್ಯಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here