ಬಂಟ್ವಾಳ: ಗೂಡ್ಸ್ ಮಿನಿಲಾರಿ – ದ್ವಿಚಕ್ರ ವಾಹನದ‌ ನಡುವೆ ಅಪಘಾತ – ಸಹ ಸವಾರ ಮೃತ್ಯು – ಇನ್ನೊರ್ವನಿಗೆ ಗಾಯ

0

ವಿಟ್ಲ: ಗೂಡ್ಸ್ ಮಿನಿಲಾರಿ ಹಾಗೂ ದ್ವಿಚಕ್ರ ವಾಹನದ‌ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿದ್ದ ಹಿಂಬದಿ ಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಜು.6ರಂದು ಸಾಯಂಕಾಲ ನಡೆದಿದೆ.

ಕಾಸರಗೋಡು ಸಮೀಪದ ಬೇಕಲ ನಿವಾಸಿ ನಿಖಿಲ್(24 ವ.) ಮೃತ ದುರ್ದೈವಿ. ಸ್ಕೂಟರ್‌ ಸವಾರ ಗುರುಪ್ರೀತ್ ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ಪುಂಜಾಲಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ಕೂಟರ್ ಹಾಗು‌ ವಿರುದ್ಧ ದಿಕ್ಕಿನಿಂದ ಬಂದ ಮಿನಿಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಪಿಕಪ್ ವಾಹನವೊಂದನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಮಿನಿಲಾರಿ ಸ್ಕೂಟರ್‌ಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಅಪಘಾತದ ತೀವ್ರತೆಗೆ ನಿಖಿಲ್ ಅವರ ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳೀಯರು ಗಾಯಾಳು ಗುರುಪ್ರೀತ್ ಅವರನ್ನು ಅಂಬ್ಯುಲೆನ್ಸ್ ಮೂಲಕ ಮಂಗಳೂರು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಂಟ್ವಾಳ ಸಂಚಾರಿ ಠಾಣಾ ಎಸ್‌.ಐ. ಸುತೇಶ್ ಅವರು ಸ್ಥಳಕ್ಕೆ ತೆರಳಿ ಪರಿಶೀಲಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here