ಕಾವು; ಬುಶ್ರಾ ಅಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

0

ಕಾವು: ಬುಶ್ರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಜು 5 ರಂದು ಆಚರಿಸಲಾಯಿತು. ಬುಶ್ರಾ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ಅಝೀಜ್ ಕಾರ್ಯಕ್ರಮ ಉದ್ಘಾಟಿಸಿದರು.ಶಾಲೆಯ ಮುಖ್ಯಶಿಕ್ಷಕಿ ದೀಪಿಕಾ ಚಾಕೋಟಿ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ನಿರ್ದೇಶಕ ಬದ್ರುದ್ದಿನ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಉಪಸ್ಥಿತರಿದ್ದರು . ಹೇಮಲತಾ ಕಜೆಗದ್ದೆ ಕಾರ್ಯಕ್ರಮವನ್ನು ನಿರೂಪಿಸಿದರು. ಶೈಕ್ಷಣಿಕ ಸಲಹೆಗಾರ ಕೃಷ್ಣ ಪ್ರಸಾದ್ ಎಲ್ಲರನ್ನು ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿ ತಂಡದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಮತ್ತು ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಗಿಡವನ್ನು ನೀಡುವುದರ ಮೂಲಕ ವನಮಹೋತ್ಸವವನ್ನು ಆಚರಿಸಲಾಯಿತು.

LEAVE A REPLY

Please enter your comment!
Please enter your name here