ಕಾವು:ಬುಶ್ರಾ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಕಾರ್ಯಕ್ರಮ ಬುಶ್ರಾ ಅಡಿಟೋರಿಯಂನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಮೋನಪ್ಪ ಪೂಜಾರಿ ಹಾಗೂ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಅಝೀಜ್ ರವರು ದೀಪ ಪ್ರಜ್ವಾನಗೊಳಿಸಿ ಕಾರ್ಯಕ್ರಮವನ್ನು ಉದ್ಘಾಟಸಿ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿ ಶುಭ ಹಾರೈಸಿದರು.
ಸಂಸ್ಥೆಯ ಅಡಳಿತ ಮಂಡಳಿ ನಿರ್ದೇಶಕ ಬದ್ರುದ್ದೀನ್ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳುವುದರ ಜೊತೆಗೆ ಸಂಸ್ಥೆಯಿಂದ ಹೊರಹೋಗುವಾಗ ಸಮಾಜದಲ್ಲಿ ಒಳ್ಳೆಯ ವಿದ್ಯಾರ್ಥಿ ಎಂದು ಗುರುತಿಸುವಂತಹ ವ್ಯಕ್ತಿತ್ವ ವನ್ನು ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಸಂಸ್ಥೆಯ ಮುಖ್ಯ ಶಿಕ್ಷಕಿ ದೀಪಿಕಾ ಚಾಕೋಟೆ ಇವರು ಪ್ರಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನ ಸ್ವಾಗತಿಸಿದರು. ಮತ್ತು ಶಾಲೆಯ ನಾಯಕ ಉಪನಾಯಕ ಹಾಗೂ ಸಚಿವ ಸಂಪುಟದ ಎಲ್ಲಾ ಸಚಿವರಿಗೆ ಪ್ರಮಾಣ ವಚನವನ್ನು ಬೋಧಿಸಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿ ಸರಕಾರದ ಜವಾಬ್ದಾರಿಗಳನ್ನು ತಿಳಿಸಿದರು. ಶಾಲೆಯ ಹಿರಿಯ ಶಿಕ್ಷಕಿ ಹೇಮಲತಾ ಕಜೆ ಗದ್ದೆ ಕಾರ್ಯಕ್ರಮವನ್ನು ನಿರೂಪಿಸಿದರು. ಚುನಾವಣಾ ಅಧಿಕಾರಿ ಉಮೇಶ್ ನಾಯ್ಕ್ ಇವರು ಮಂತ್ರಿಮಂಡಲ ಸದಸ್ಯರಿಗೆ ಪ್ರಮಾಣ ಪತ್ರ ವಿತರಿಸಿ ಅವರ ಕರ್ತವ್ಯಗಳನ್ನು ವಿವರಿಸಿದರು. ಶೈಕ್ಷಣಿಕ ಸಲಹೆಗಾರ ಕೃಷ್ಣ ಪ್ರಸಾದ್ ವಂದಿಸಿದರು.