ಪುತ್ತೂರು:ದ.ಕ.ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಬಿರುಸಿನಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜು.9ರಂದು ದ.ಕ.ಜಿಲ್ಲೆಯಲ್ಲಿ ಅಂಗನವಾಡಿಯಿಂದ ದ್ವಿತೀಯ ಪಿಯುಸಿ ತನಕ ಸರಕಾರಿ,ಖಾಸಗಿ,ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.