





ರಾಮಕುಂಜ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನೇತ್ರಾವತಿ ತುಳುಕೂಟ ರಾಮಕುಂಜ ಇವರ ಸೇರಿಗೆಯಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲೆ ರಾಮಕುಂಜ ಇವರ ಆಶ್ರಯದಲ್ಲಿ ಕಡಬ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತುಳು ಭಾಷೆ-ಸಂಸ್ಕೃತಿ ಕಾರ್ಯಾಗಾರ ಜು.13ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.


ಬೆಳಿಗ್ಗೆ 10 ಗಂಟೆಗೆ ನೇತ್ರಾವತಿ ತುಳುಕೂಟದ ಅಧ್ಯಕ್ಷರಾದ ಕೆ.ಸೇಸಪ್ಪ ರೈ ಅವರು ಕಾರ್ಯಾಗಾರ ಉದ್ಘಾಟಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳಿಗ್ಗೆ 11.30ರಿಂದ 12.30ರ ತನಕ ನಡೆಯುವ ಗೋಷ್ಠಿಯಲ್ಲಿ ಉಪನ್ಯಾಸಕಿ ಪ್ರಶಾಂತಿ ಶೆಟ್ಟಿಯವರು ’ ತುಳು ಬಾಸೆದ ಸಾಹಿತ್ಯೊಲು’ ಎಂಬ ವಿಚಾರದಲ್ಲಿ ಉಪನ್ಯಾಸ ನೀಡಲಿದ್ದಾರೆ. ಮಧ್ಯಾಹ್ನ 1.30ರಿಂದ 2.30ರ ತನಕ ನಡೆಯುವ ತುಳುನಾಡ ಗೊಬ್ಬುಲು ಗೋಷ್ಠಿಯಲ್ಲಿ ತುಳು ಸಾಹಿತಿ ಚಂದ್ರಹಾಸ ಕಣಂತೂರು ಹಾಗೂ 2.30ರಿಂದ 3.30ರ ತನಕ ನಡೆಯುವ ತುಳುನಾಡ್ದ ಪರ್ಬೊಲು ಗೋಷ್ಠಿಯಲ್ಲಿ ತುಳು ಎಂ.ಎ.ವಿದ್ಯಾರ್ಥಿ ಪ್ರಸಾದ್ ಅಂಚನ್ ಅವರು ಉಪನ್ಯಾಸ ನೀಡಲಿದ್ದಾರೆ. ಸಂಜೆ 3.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ ಅವರು ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.













