ಒಳಮೊಗ್ರು ಗ್ರಾ.ಪಂ ನಿಂದ ಡೆಂಗ್ಯೂ ಜಾಗೃತಿ 

0

ಪುತ್ತೂರು: ಮಾರಕ ಡೆಂಗ್ಯೂ ಮಹಾಮಾರಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒಳಮೊಗ್ರು ಗ್ರಾಪಂ ನಿಂದ ಡೆಂಗ್ಯೂ ಜಾಗೃತಿ ಮೂಡಿಸುವ ಕೆಲಸ ನಡೆಯಿತು.

ಕುಂಬ್ರ ಪೇಟೆಯ ಅಂಗಡಿ, ಹೋಟೆಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಅಂಗಡಿ ಸುತ್ತಮುತ್ತ ಪಾತ್ರೆ, ಬಕೆಟ್, ಸೀಯಾಳದ ಗೆರಟೆ ಇತ್ಯಾದಿಗಳಲ್ಲಿ ನೀರು ನಿಲ್ಲದಂತೆ ಜಾಗೃತಿ ವಹಿಸಬೇಕು ಎಂದು ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ಕಾರ್ಯದರ್ಶಿ ಜಯಂತಿ ಹಾಗೂ ಸದಸ್ಯರುಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here