ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ವಿದ್ಯುತ್ ಸುರಕ್ಷತಾ ಅರಿವು ಕಾರ್ಯಕ್ರಮ

0

ವಿಟ್ಲ: ಸುರಕ್ಷತೆಯೇ ನಮ್ಮ ಆದ್ಯತೆ ಎಂಬ ಧ್ಯೇಯದಡಿಯಲ್ಲಿ ದಿನದ 24 ಗಂಟೆಯೂ ಸೈನಿಕೋಪಾದಿಯಲ್ಲಿ ಕೆಲಸ ನಿರ್ವಹಿಸುವ ಮೆಸ್ಕಾಂ ವಿದ್ಯುತ್ ಯೋಧರ ಕರ್ತವ್ಯ ಪ್ರಜ್ಞೆ ಶ್ಲಾಘನೀಯ, ಆದಾಗ್ಯೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ವಿದ್ಯುತ್ ಬಳಕೆ,ಜಾಗರೂಕತೆ, ಅವಶ್ಯಕತೆ, ಉಪಯೋಗಗಳು ಮತ್ತು ಸಂಭವಿಸಬಹುದಾದ ವಿವಿಧ ಅನಾಹುತಗಳ ಬಗ್ಗೆ ಮುಂಜಾಗ್ರತೆ ವಹಿಸಬೇಕು ಎಂದು ಮೆಸ್ಕಾಂ ಮಾಣಿ ವಲಯದ ಶಾಖಾಧಿಕಾರಿ ದಿನೇಶ್ ನುಡಿದರು.

ಅವರು ಮಾಣಿಯ ಕರ್ನಾಟಕ ಪ್ರೌಢ ಶಾಲೆ ಮಾಣಿಯಲ್ಲಿ ನಡೆದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಸಪ್ತಾಹದ ಅಂಗವಾಗಿ – ವಿದ್ಯುತ್ತಿನ ಸುರಕ್ಷತೆ ಅರಿವು ಮತ್ತು ವಿದ್ಯುತ್ ಉಳಿತಾಯದ ಬಗ್ಗೆ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ವಿದ್ಯಾಭಿವರ್ಧಕ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ಕಿರಣ್ ಹೆಗ್ಡೆರವರು ಮಾತನಾಡಿ ವಿದ್ಯುತ್ ಯೋಧರಿಗೆ ಗೌರವ ಕೊಡುವುದು, ಅವರೊಂದಿಗೆ ಸೌಜನ್ಯತೆಯಿಂದ ವರ್ತಿಸುವ ಮನೋಭಾವ ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.ವೇದಿಕೆಯಲ್ಲಿ ಮೆಸ್ಕಾಂ – ವಿಟ್ಲ – ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗೋವಿಂದರಾಜ್, ಶಾಲಾ ಸಂಚಾಲಕರಾದ ಹಾಜಿ ಇಬ್ರಾಹಿಂ ಉಪಸ್ಥಿತರಿದ್ದರು.

ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಎಸ್. ಚೆನ್ನಪ್ಪ ಗೌಡ ಸ್ವಾಗತಿಸಿ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಸಾರಿಕಾ ವಂದಿಸಿ, ಹಿಂದಿ ಶಿಕ್ಷಕರಾದ ಜಯರಾಮ ಕಾಂಚನ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿರಾದ ಮೈತ್ರಿ ಮತ್ತು ತಂಡ ಪ್ರಾರ್ಥಿಸಿ, ಶಾಲಾ ನಾಯಕ ಎಸ್. ಅಬ್ದುಲ್ ರಹೀಮ್ ಸಹಕರಿಸಿದರು.

LEAVE A REPLY

Please enter your comment!
Please enter your name here