ಡಾ.ನಝೀರ್ ಅಹಮ್ಮದ್ ಕ್ಲಿನಿಕ್‌ನಲ್ಲಿ ಮಾಸಿಕ ಥೈರಾಯಿಡ್ ತಪಾಸಣಾ ಶಿಬಿರ, ಉಚಿತ ಮಧುಮೇಹ, HBA1C, ಹಿಮೋಗ್ಲೋಬಿನ್, ನ್ಯೂರೋಪಥಿ ತಪಾಸಣೆ

0

ಪುತ್ತೂರು: ವೈದ್ಯಕೀಯ ತಜ್ಞ ಡಾ|ನಝೀರ್ ಅಹಮ್ಮದ್ ಡಯಾಬೆಟಿಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವುಗಳ ಸಹಯೋಗದಲ್ಲಿ ಮಾಸಿಕ ಥೈರಾಯಿಡ್ ಗ್ರಂಥಿಯ ತಪಾಸಣಾ ಶಿಬಿರ, ಉಚಿತ ಮಧುಮೇಹ(GRBS), ಹಿಮೋಗ್ಲೋಬಿನ್,HBA1C, ನ್ಯೂರೋಪಥಿ ತಪಾಸಣೆಯು ಜು.10 ರಂದು ಕಲ್ಲಾರೆ ಕೃಷ್ಣಾ ಆರ್ಕೆಡ್‌ನಲ್ಲಿರುವ ಡಾ|ನಝೀರ್ ಅಹಮ್ಮದ್‌ರವರ ಕ್ಲಿನಿಕ್‌ನಲ್ಲಿ ಗೆ ನಡೆಯಿತು.

ರೋಟರಿ ಕ್ಲಬ್ ಪುತ್ತೂರು ಅಧ್ಯಕ್ಷ ಡಾ.ಶ್ರೀಪತಿ ರಾವ್ ಮಾತನಾಡಿ, ಡಾ.ನಝೀರ್ ಅಹಮದ್ ರವರ ಕ್ಲಿನಿಕ್ ವರ್ಷಂಪ್ರತಿ ರೋಟರಿ ವತಿಯಿಂದ ನಡೆಯುವ ಈ ತಪಾಸಣಾ ಶಿಬಿರವು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಮಧುಮೇಹ ಅನ್ನುವುದು ಸೈಲೆಂಟ್ ಕಿಲ್ಲರ್ ಆಗಿದೆ. ಪ್ರತಿಯೋರ್ವರು ತಮ್ಮ ಆರೋಗ್ಯ ಸುಸ್ಥಿತಿಯಲ್ಲಿರಬೇಕಾದರೆ ಕಾಲಕಾಲಕ್ಕೆ ತಪಾಸಣೆ ಅಗತ್ಯವಿದೆ. ರೋಗ ಬರುವುದಕ್ಕೆ ಮುನ್ನವೇ ಅದರ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮಾನವನ ಅಗತ್ಯವಾಗಿದ್ದು ಇದರ ಪ್ರಯೋಜನವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದರು.

ರೋಟರಿ ಕ್ಲಬ್ ಪುತ್ತೂರು ನಿಕಟಪೂರ್ವ ಅಧ್ಯಕ್ಷ ಜೈರಾಜ್ ಭಂಡಾರಿ ಮಾತನಾಡಿ, ಕೆಲವು ವರ್ಷಗಳಿಂದ ರೋಟರಿ ಮೂಲಕ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಂಡು ಸೇವಾ ಮನೋಭಾವವನ್ನು ಪ್ರದರ್ಶಿಸಿದೆ. ನಿರ್ಧರಿತ ದಿನದಂದು ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳುತ್ತಿರುವ ಡಾ.ನಝೀರ್ ಅಹಮದ್ ರವರು ಸರ್ವತ್ರ ಜನಮನ್ನಣೆ ಗಳಿಸಿದ್ದು ಇದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಿ ಎಂದ ಅವರು ತನ್ನ ಅವಧಿಯಲ್ಲಿ ಪೂರ್ಣ ಸಹಕಾರ ನೀಡಿದ ಡಾ.ನಝೀರ್ ಅಹಮದ್ ರವರಿಗೆ ಕಿರು ಕಾಣಿಕೆಯನ್ನು ಅರ್ಪಿಸಿದರು.ಅತಿಯಾದ ದಣಿವು, ಸುಸ್ತು, ನಿತ್ರಾಣ, ಮಲಬದ್ಧತೆ ಅಥವಾ ಅತಿಸಾರ, ಶೀತಕ್ಕೆ ಅಥವಾ ತಾಪಕ್ಕೆ ಅಸಹಿಷ್ಣುತೆ, ಕೂದಲು ಉದುರುವಿಕೆ, ನೆನಪಿನ ಶಕ್ತಿ ಕುಂದುವುದು, ಏಕಾಗ್ರತೆ ಕಷ್ಟವಾಗುವುದು, ತೂಕ ಹೆಚ್ಚಾಗುವುದು ಅಥವಾ ಕಡಿಮೆ ಆಗುವುದು, ಹೆಂಗಸರಿಗೆ ಅತಿಯಾದ ಮಾಸಿಕ ಸ್ರಾವ ಅಥವಾ ನಿಯಮ ತಪ್ಪಿದ ಮಾಸಿಕ ಸ್ರಾವ, ಮೃದುವಾದ ಕರ್ಕಶ ಸ್ವರ, ಗಂಟಲಿನಲ್ಲಿ ಊದುಕೊಳ್ಳುವಿಕೆ, ಅಧಿಕ ಎದೆ ಬಡಿತ ಅಥವಾ ರಕ್ತದೊತ್ತಡವುಳ್ಳವರು ಶಿಬಿರದಲ್ಲಿ ಪಾಲ್ಗೊಂಡು ಡಾ.ನಝೀರ್ ಅಹಮದ್ ರವರಲ್ಲಿ ಸಲಹೆ ಪಡೆದುಕೊಂಡರು.

ರೋಟರಿ ಕ್ಲಬ್ ಪುತ್ತೂರು ಕಾರ್ಯದರ್ಶಿ ದಾಮೋದರ್ ಕೆ, ಕೋಶಾಧಿಕಾರಿ ಎಂ.ಜಿ ರಫೀಕ್, ಸಮುದಾಯ ಸೇವಾ ವಿಭಾಗದ ನಿರ್ದೇಶಕ ರಾಜ್ ಗೋಪಾಲ್ ಬಲ್ಲಾಳ್, ಸದಸ್ಯರಾದ ಹೆರಾಲ್ಡ್ ಮಾಡ್ತಾ, ಪ್ರಕಾಶ್ ನೆಲ್ಲಿಪುಣಿ ಉಪಸ್ಥಿತರಿದ್ದರು. ರೋಟರಿ ಸದಸ್ಯ ಹಾಗೂ ಡಾ.ನಝೀರ್ ಅಹಮದ್ ಡಯಾಬೆಟ್ಸ್ ಸೆಂಟರ್ ನ ಡಾ.ನಝೀರ್ ಅಹಮದ್ ಸ್ವಾಗತಿಸಿ, ರೋಟರಿ ಸದಸ್ಯ ಸುರೇಶ್ ಶೆಟ್ಟಿ ವಂದಿಸಿದರು. ಈ ಸಂದರ್ಭದಲ್ಲಿ ಮೆಕ್ಲಾಯಿಡ್ ಕಂಪೆನಿಯ ವೀರೇಂದ್ರ, ಎಮ್ಯುಕ್ಯೂರ್ ಕಂಪೆನಿಯ ತೌಸೀಫ್, ಸನ್ ಫಾರ್ಮಾ ಕಂಪೆನಿಯ ನಿಶಾಂತ್ ಶೆಟ್ಟಿ, ಟೊರೆಂಟ್ ಕಂಪೆನಿಯ ಚೇತನ್ ಶೆಟ್ಡಿ, ಅಗಿಲಾಸ್ ಲ್ಯಾಬಿನ ಸಿಬ್ಬಂದಿ, ಡಾ.ನಝೀರ್ ಅಹಮದ್ ಡಯಾಬೆಟಿಸ್ ಸೆಂಟರ್ ನ ಸಿಬ್ಬಂದಿ ಸಹಕರಿಸಿದರು.

LEAVE A REPLY

Please enter your comment!
Please enter your name here