ಶ್ರೀ ರಾಮಕುಂಜೇಶ್ವರ ಕ.ಮಾ.ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಕುರಿತಾದ ತರಬೇತಿ ಕಾರ್ಯಾಗಾರ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಕುರಿತಾಗಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ಜರಗಿತು.

ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರದ ಉಪನ್ಯಾಸಕರಾದ ಗುಡ್ಡಪ್ಪ ಬಲ್ಯರವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಶಾಲಾ ಮುಖ್ಯ ಗುರು ಸತೀಶ್ ಭಟ್‌ರವರು ಶಾಲೆಯಲ್ಲಿ ವಿದ್ಯಾರ್ಥಿ ನಾಯಕರ ಜವಾಬ್ದಾರಿಯ ಕುರಿತಾಗಿ ತಿಳಿಸಿದರು. ಶಾಲಾ ಸಮಾಜ ವಿಜ್ಞಾನ ಶಿಕ್ಷಕರಾದ ದಿನೇಶ್ ಬಿ.ಅವರು ವಂದಿಸಿದರು. ಶಾಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿ ಪರಿಷತ್ತಿನ ಸದಸ್ಯ ವಿದ್ಯಾರ್ಥಿಗಳು ತರಬೇತಿ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here