ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಗ್ರಾಮ ಸಮಿತಿ ಒಳಮೊಗ್ರು ಕುಂಬ್ರ ಇದರ ವಾರ್ಷಿಕ ಮಹಾಸಭೆ ಮತ್ತು ಪುಸ್ತಕ, ಸಮವಸ್ತ್ರ ವಿತರಣೆ ಹಾಗೂ ಸನ್ಮಾನ ಕಾರ್ಯಕ್ರಮ ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್ ಕುಮಾರ್ ಬರೆಮೇಲುರವರ ಅಧ್ಯಕ್ಷತೆಯಲ್ಲಿ ಜು.7ರಂದು ಕುಂಬ್ರ ನವೋದಯ ರೈತ ಸಭಾಭವನದಲ್ಲಿ ನಡೆಯಿತು. ತಾಲೂಕು ಬಿಲ್ಲವ ಸಂಘದ ಕಾರ್ಯದರ್ಶಿ ಚಿದಾನಂದ ಸುವರ್ಣರವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಜತೆ ಕಾರ್ಯದರ್ಶಿ ದಯಾನಂದ ಕರ್ಕೇರರವರು ನಾರಾಯಣ ಗುರುಗಳ ಆದರ್ಶ ಮತ್ತು ಉದ್ದೇಶಗಳ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ಬಿಲ್ಲವ ಸಂಘದ ಕೋಶಾಧಿಕಾರಿ ಬಿ.ಟಿ ಮಹೇಶ್ಚಂದ್ರ ಸಾಲ್ಯಾನ್, ಉಪಾಧ್ಯಕ್ಷೆ ವಿಮಲ ಸುರೇಶ್ರವರುಗಳು ಪುಸ್ತಕ ವಿತರಣೆ ಮಾಡಿ ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಬಿಲ್ಲವ ಗ್ರಾಮ ಸಮಿತಿಯ ಗೌರವಾಧ್ಯಕ್ಷ ಬಾಬು ಪೂಜಾರಿ ಬಡಕ್ಕೋಡಿ, ಸುಶಾ ಡ್ರೆಸ್ಸಸ್ ಮಾಲಕ ಸುರೇಶ್ ಕುಮಾರ್ ತಿಂಗಳಾಡಿ, ಮಹಿಳಾ ವೇದಿಕೆಯ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಉಪಸ್ಥಿತರಿದ್ದರು. ಸ್ಮೃತಿ ಪಲ್ಲತ್ತಾರು ಪ್ರಾರ್ಥಿಸಿದರು. ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾದ ಉಮೇಶ್ ಕುಮಾರ್ ಬರೆಮೇಲು ಸ್ವಾಗತಿಸಿದರು. ಚಂದ್ರಕಾಂತ ಶಾಂತಿವನ ಕಾರ್ಯಕ್ರಮ ನಿರೂಪಿಸಿದರು. ದಿವ್ಯಜ್ಯೋತಿ ಸತೀಶ್ ಮುಡಾಲ ವಂದಿಸಿದರು. ಬಿಲ್ಲವ ಮಹಿಳಾ ವೇದಿಕೆಯ ಕಾರ್ಯದರ್ಶಿ ಸುಷ್ಮಾ ಸತೀಶ್ ಕೋಡಿಬೈಲು, ಶಶಿ ಅನಿಲ್ ಕುಮಾರ್ ಬಡಕ್ಕೋಡಿ ಸಹಕರಿಸಿದ್ದರು.
ಪುಸ್ತಕ, ಸಮವಸ್ತ ವಿತರಣೆ, ಸನ್ಮಾನ
ಈ ಸಂದರ್ಭದಲ್ಲಿ ಸುಮಾರು 50 ಮಂದಿ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಇಬ್ಬರಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು. ಹಾಗೇ ಎಸ್ಎಸ್ಎಲ್ಸಿ,ಪಿಯುಸಿ ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ 6 ಮಂದಿ ವಿದ್ಯಾರ್ಥಿಗಳನ್ನು ಸನ್ಮನಿಸಿ ಗೌರವಿಸಲಾಯಿತು.