ಎಲ್ಲರೂ ಪೂಜೆಗೆ ಆಗಮಿಸಿ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿ – ಶಕುಂತಳಾ ಶೆಟ್ಟಿ
ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಹಾಗು ವಜ್ರಮಾತಾ ಮಹಿಳಾ ಭಜನಾ ಮಂಡಳಿಯ ಸಹಯೋಗದಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಆ.16ಕ್ಕೆ ನಡೆಯಲಿರುವ 17ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರವನ್ನು ಜು.11ರಂದು ಸಂಘದ ಕಚೇರಿಯಲ್ಲಿ ಬಿಡುಗಡೆ ಮಾಡಲಾಯಿತು.
ಸಮರ್ಪಣಾ ಮಹಿಳಾ ಸೇವಾ ಸಮಿತಿ ಗೌರವಾಧ್ಯಕ್ಷೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಪೂಜಾ ಕಾರ್ಯಕ್ರಮದಲ್ಲಿ ಭಜನೆ, ಸಾಧಕರಿಬ್ಬರಿಗೆ ಸನ್ಮಾನ, ಸಭಾ ಕಾರ್ಯಕ್ರಮ ನಡೆಯಲಿದೆ. ಮಹಾಲಿಂಗೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ನಮ್ಮ ಸಂಸ್ಥೆಗಳ 17ನೇ ವರ್ಷದ ವರಮಹಾಲಕ್ಷ್ಮೀ ಪೂಜೆ ಆ.16ರಂದು ನಡೆಯಲಿದೆ. ದೇವಳದ ಅಡಳಿತಾಧಿಕಾರಿ ನವೀನ್ ಭಂಡಾರಿ ಉದ್ಘಾಟಿಸಲಿದ್ದಾರೆ. ವಿಧಾನಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ ಅವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಡ್ಯಾಶ್ ಮಾರ್ಕೆಟಿಂಗ್ ನಿರ್ದೇಶಕಿ ನಳಿನಿ ಪಿ ಶೆಟ್ಟಿ, ಜಯಶ್ರೀ ಈಶ್ವರ ಭಟ್ ಪಂಜಿಗುಡ್ಡೆ, ಅನ್ನಪೂರ್ಣಿಮ ಆರ್ ರೈ ಕುತ್ಯಾಡಿ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಎಲ್ಲರು ಆಗಮಿಸಿ ದೇವರ ಅನುಗ್ರಹಕ್ಕೆ ಪಾತ್ರರಾಗುವಂತೆ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ವಿನಂತಿಸಿದರು.
ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ, ಸಮರ್ಪಣಾ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ಗಂಗಾರತ್ನಾ ವಿ ರೈ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸ ಸೇವಾ ಕೇಂದ್ರ ಪುತ್ತೂರು ಘಟಕದ ಅಧ್ಯಕ್ಷೆ ನಯನಾ ರೈ, ಸದಸ್ಯರಾದ ಶಾರದಾ ಅರಸ್, ಸ್ವರ್ಣಲತಾ ಹೆಗ್ಡೆ, ಹರಿಣಿ ಜೆ ಶೆಟ್ಟಿ, ಜಯಂತಿ ಬಲ್ನಾಡು, ಶಾಂತಿ ಹೆಗ್ಗಡೆ, ಸುಜಯಾ, ಸುಮಿತ್ರ, ಹರೀಶ್ ಶೆಟ್ಟಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.