ಆಲಂಕಾರು ಆದರ್ಶ ಆಟೋ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ಪುರಂದರ ಗೌಡ ಕೋಡ್ಲ ನಿಧನ

0

ಆಲಂಕಾರು: ಆಲಂಕಾರು ಆದರ್ಶ ರಿಕ್ಷಾ ಚಾಲಕ ಮಾಲಕ ಸಂಘ ಹಾಗು ಶರವೂರು ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷ ಪುರಂದರ ಗೌಡ (48) ಕೋಡ್ಲ ಜು.12 ರಂದು ನಿಧನರಾದರು. ಪುರಂದರ ಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.ಮೃತರು ಕಾಂಗ್ರೆಸ್ ಕಾರ್ಯಕರ್ತನಾಗಿ, ಅಲಂಕಾರಿನ ಶರವೂರು ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷರಾಗಿ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ವೃತ್ತಿಯಲ್ಲಿ ಆಟೋ ಚಾಲಕನಾಗಿ, ಕೃಷಿಕನಾಗಿ ವಿವಿಧ ಸಂಘ ಸಂಸ್ಥೆಯಲ್ಲಿ ತನ್ನನು ತಾನು ತೊಡಗಿಸಿಕೊಳ್ಳುತ್ತಿದ್ದ ಪುರಂದರ ಗೌಡ ನಗ್ರಿಯವರು ಪತ್ನಿ ತುಳಸಿ, ಮಗ ಸಾಧ್ವಿಕ್,ಮಗಳು ಸಾನ್ವಿತಾ ರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here