





ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವತಿಯಿಂದ ಕೊಡಿಮರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು. ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.



ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್, ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್, ಕೋಡಿಂಬಾಡಿ ಹಿ.ಪ್ರಾ. ಶಾಲಾ ಮುಖ್ಯಗುರು ಬಾಲಕೃಷ್ಣ ಎನ್, ಬೆಳ್ಳಿಪ್ಪಾಡಿ ಶಾಲಾ ಮುಖ್ಯಗುರು ಯಶೋದಾ, ಅಂಗನವಾಡಿ ಕಾರ್ಯಕರ್ತೆಯರಾದ ರೇವತಿ, ವೀಣಾ ಮತ್ತಿತರರು ಉಪಸ್ಥಿತರಿದ್ದರು.















