ಜು.15: ಪುಣಚ ತೋರಣಕಟ್ಟೆ ಶ್ರೀ ಗುರು ನಿಲಯ’ದ ಗೃಹಪ್ರವೇಶ

0

ಪುಣಚ: ಟೀಮ್ ಸತ್ಯಜಿತ್ ಸುರತ್ಕಲ್ ಮತ್ತು ಬಿಲ್ಲವ ಬ್ರಿಗೇಡ್ ಹಾಗೂ ಊರವರ ಸಹಕಾರದೊಂದಿಗೆ ನಿರ್ಮಿಸಿದ ಮನೆಯ ಗೃಹಪ್ರವೇಶ ಕಾರ್ಯಕ್ರಮ ಜು.15ರಂದು ನಡೆಯಲಿದೆ.
ಪುಣಚ ಗ್ರಾಮದ ತೋರಣಕಟ್ಟೆ ಎಂಬಲ್ಲಿ ನಿರ್ಮಿಸಿದ ಶ್ರೀ ಗುರು ನಿಲಯದ ಗೃಹ ಪ್ರವೇಶ ಕಾರ್ಯಕ್ರಮ ಬೆಳಿಗ್ಗೆ ಮಹಾ ಗಣಪತಿ ಹೋಮದೊಂದಿಗೆ ನಡೆಯಲಿದೆ. ಬಳಿಕ ನಡೆಯುವ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮದಲ್ಲಿ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಮಹಾಬಲೇಶ್ವರ ಸ್ವಾಮೀಜಿ ಹಾಗೂ ಅನೇಕ ಗಣ್ಯಾತಿ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here