ಗುಂಡ್ಯ: ಕಾರು-ಲಾರಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

0

ನೆಲ್ಯಾಡಿ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿಗಳಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳಿ ಎಂಬಲ್ಲಿ ಜು.13ರಂದು ಬೆಳಿಗ್ಗೆ ನಡೆದಿದೆ.


ಗೇರುಕಟ್ಟೆ ನಿವಾಸಿಗಳು ಬೆಂಗಳೂರಿನಿಂದ ಕಾರು ಖರೀದಿಸಿ ಬರುತ್ತಿದ್ದ ವೇಳೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ನಡುವೆ ಬರ್ಚಿನಹಳ್ಳ ಎಂಬಲ್ಲಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿ ಮಹಿಳೆ, ಮಗು ಸೇರಿ ಐವರು ಪ್ರಯಾಣಿಸುತ್ತಿದ್ದು ಈ ಪೈಕಿ ಹರೀಶ್ ಹಾಗೂ ಯೋಗೀಶ್ ಎಂಬವರು ತೀವ್ರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದ್ದು ಗಾಯಾಳುಗಳನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

LEAVE A REPLY

Please enter your comment!
Please enter your name here