ನರಿಮೊಗರು: ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಜು.12ರಂದು ಶ್ರೀ ಗೋಪಾಲಕೃಷ್ಣ ಮಂದಿರ ವೇದಿಕೆಯಲ್ಲಿ 2024-25ನೇ ಸಾಲಿನ ತಾಲೂಕು ಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆ ನೆರವೇರಿತು.
ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಸುಂದರ ಗೌಡ .ಕೆ , ರಾಜ್ಯಪರಿಷತ್ತು ಸದಸ್ಯರು ಗ್ರೇಡ್ 1 ದೈಹಿಕ ಶಿಕ್ಷಕರ ಸಂಘದ ಶ್ರೀ ಸಹದೇವ ಏರಾಜೆ ,ಪುತ್ತೂರು ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚಕ್ರಪಾಣಿ ,ಪುತ್ತೂರು ತಾಲೂಕು ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸುಧಾಕರ್ ರೈ ,ದ ಕ ಜಿಲ್ಲಾ ದೈಹಿಕ ಶಿಕ್ಷಕ ಸಂಘದ ಕಾರ್ಯಧ್ಯಕ್ಷ ಮಾಮಚ್ಚನ್ ,ಕಡಬ ವಲಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಾಲಕೃಷ್ಣ ಸವಣೂರ್ ,ಪುತ್ತೂರು ಅಕ್ಷರದಾಸೋಹ ನಿರ್ದೇಶಕ ವಿಷ್ಣುಪ್ರಸಾದ್ ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವಿಮಲ್ ಕುಮಾರ್ , ಶಾಲಾ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಕೆದಿಲಾಯ, ಆಡಳಿತ ಮಂಡಳಿಯ ಸದಸ್ಯ ಹರೀಶ್ ಪುತ್ತೂರಾಯ ರವರು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಧಿಕಾರಿ ಶ್ರೀ ಲೋಕೇಶ್ ಎಸ್ ಆರ್ ರವರು ಮಾತನಾಡಿ ಮುಂಬರುವ ಕ್ರೀಡಾಕೂಟವು ಎಲ್ಲರ ಸಹಕಾರದೊಂದಿಗೆ ಯಶಸ್ವಿಗೊಳ್ಳಲಿ ಎಂದರು.ಸಂಚಾಲಕ ಭಾಸ್ಕರ್ ಆಚಾರ್ ಹಿಂದಾರು ಮಾತನಾಡಿ ತಾಲೂಕು ಮಟ್ಟದ ಕ್ರೀಡಾಕೂಟವು ನಮ್ಮ ಶಾಲೆಯಲ್ಲಿ ನಡೆಯುವ ಕಾರಣ ಪೂರ್ವಸಿದ್ಧತೆಗಳನ್ನು ಮಾಡಲು ಎಲ್ಲರ ಸಹಕಾರವು ಅಗತ್ಯವಿದೆ ಎಂದರು.
ಸಂಸ್ಥೆಯ ಅಧ್ಯಕ್ಷ ಜಯರಾಮ ಕೆದಿಲಾಯ ಶಿಬರ ಮಾತನಾಡಿ ತಾಲೂಕು ಮಟ್ಟದ ಕ್ರೀಡಾಕೂಟವು ನಮ್ಮ ಶಾಲೆಯಲ್ಲಿ ನಡೆಯುವುದರಿಂದ ಅತ್ಯಂತ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಪಂದ್ಯಾಟಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ಹಂಚಲಾಯಿತು ಹಾಗೂ ವಲಯ ಮಟ್ಟದ ಕ್ರೀಡಾಕೂಟವನ್ನು ಸಂಘಟಿಸುವ ಜವಾಬ್ದಾರಿಯನ್ನು ಹಂಚಲಾಯಿತು.
ಪುತ್ತೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಕರ್ತವ್ಯ ನಿರ್ವಹಿಸಿ ರಾಮನಗರ ಜಿಲ್ಲೆಗೆ ಜಿಲ್ಲಾ ದೈಹಿಕ ಪರಿವೀಕ್ಷಣಾಧಿಕಾರಿ ಮುಂಬಡ್ತಿ ಹೊಂದಿ ನಿರ್ಗಮಿಸುತ್ತಿರುವ ಸುಂದರ ಗೌಡರಿಗೆ ಸಾಂದೀಪನಿ ವಿದ್ಯಾ ಸಂಸ್ಥೆಯಿಂದ ಗೌರವಿಸಲಾಯಿತು.
ಶಾಲಾ ಮುಖ್ಯೋಪಾಧ್ಯಾಯರಾದ ಜಯಮಾಲಾ ವಿ ಎನ್ ರವರು ಸ್ವಾಗತಿಸಿ, ಸಹ ಶಿಕ್ಷಕಿ ಪ್ರಮೀಳಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ದೈಹಿಕ ಶಿಕ್ಷಕ ಮಂಜುನಾಥ್ ವಂದಿಸಿದರು.