ಪುತ್ತೂರು: ದ.ಕ.ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.15ರ ಸೋಮವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಘೋಷಿಸಿದ್ದಾರೆ.