ಸೌತಡ್ಕ ದೇವಳದಲ್ಲಿ 80 ಲಕ್ಷ ರೂ.ವೆಚ್ಚದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಶಿಲಾನ್ಯಾಸ

0

ನೆಲ್ಯಾಡಿ: ಸೌತಡ್ಕ ದೇವಸ್ಥಾನದ ಆವರಣದಲ್ಲಿ ಸುಮಾರು 80 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜು.14ರಂದು ಶಿಲಾನ್ಯಾಸ ಮಾಡಲಾಯಿತು.
ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಅವರ ಉಪಸ್ಥಿತಿಯಲ್ಲಿ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಶಿಲಾನ್ಯಾಸ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಮಲ್ಲಿಕಾ ಪಕ್ಕಳ ಅವರು, ಮಾಜಿ ಟ್ರಸ್ಟಿಗಳ ಸತತ ಪರಿಶ್ರಮದಿಂದ ಈ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಲು ಸಾಧ್ಯವಾಗಿದೆ. ತಮ್ಮ ಅವಧಿ ಮುಗಿದ ಮೇಲೂ ನಿರಂತರವಾಗಿ ನನ್ನನ್ನು ಸಂಪರ್ಕಿಸಿ ಘಟಕಕ್ಕೆ ಅನುಮತಿ ದೊರಕಿಸಲು ಶ್ರಮ ಪಟ್ಟಿದ್ದಾರೆ. ಅವರಿಗೆ ದೇವರ ಆಶೀರ್ವಾದವಿರಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ದೇವಳದ ಆಡಳಿತ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ವಿಶ್ವನಾಥ್ ಶೆಟ್ಟಿ, ನೈಮಿಷ ಹೌಸ್ ಆಫ್ ಸ್ಪೈಸಸ್ ಮಾಲಕ ಬಾಲಕೃಷ್ಣ ನೈಮಿಷ, ದೇವಳದ ಮ್ಯಾನೇಜರ್ ರಾಮಕೃಷ್ಣ ಶಬರಾಯ, ದೇವಳದ ಸಿಬ್ಬಂದಿಗಳು, ಮಾಜಿ ಟ್ರಸ್ಟಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here