ನೃತ್ಯಾಂತರಂಗ 114ನೇ ಸರಣಿಯಲ್ಲಿ ಬೆಂಗಳೂರಿನ ಅಪೇಕ್ಷಾ ಕಾಮತ್ ರವರ ಭರತನಾಟ್ಯ ಕಾರ್ಯಕ್ರಮ

0

ಪುತ್ತೂರು: ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಸರಣಿ ಕಾರ್ಯಕ್ರಮ ನೃತ್ಯಾಂತರಂಗದ 114ನೇ ಸರಣಿಯಲ್ಲಿ ಬೆಂಗಳೂರಿನ ಖ್ಯಾತ ಕಲಾವಿದೆ ಇಂದಿರಾ ಕಡಂಬಿಯವರ ಶಿಷ್ಯೆ ಅಪೇಕ್ಷ ಕಾಮತ್ ಇವರಿಂದ ಭರತನಾಟ್ಯ ಕಾರ್ಯಕ್ರಮ ಶಶಿಶಂಕರ ಸಭಾಂಗಣದಲ್ಲಿ ಜುಲೈ 13ರಂದು ನಡೆಯಿತು.

ಅಭ್ಯಾಗತರಾಗಿ ನಂದನ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ಇದರ ಉಪಾಧ್ಯಕ್ಷ ದಾಮೋದರ ಪಾಟಾಳಿಯವರು ಕಾರ್ಯಕ್ರಮದ ವ್ಯವಸ್ಥೆಯ ಬಗ್ಗೆ ಹಾಗೂ ಕಲಾವಿದೆಯ ನೃತ್ಯದ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಸ್ಥೆಯ ವಿದ್ಯಾರ್ಥಿಗಳಾದ ಪ್ರಣಮ್ಯ , ರಿತಿಕ , ನಿನಾದ ಪಿ. , ಜನ್ಯ ಕಾರ್ಯಕ್ರಮದ ನಿರ್ವಹಣೆ ಮಾಡಿದರು. ಗುರು ದೀಪಕ್ ಕುಮಾರ್ ಕಾರ್ಯಕ್ರಮದಲ್ಲಿ ನಿರೂಪಿಸಿದರು.


LEAVE A REPLY

Please enter your comment!
Please enter your name here