ಪುತ್ತೂರು ಪಶುಸಂಗೋಪನಾ ಇಲಾಖೆಯ ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ ಪುಷ್ಪರಾಜ ಶೆಟ್ಟಿ ಕರ್ತವ್ಯಕ್ಕೆ ಹಾಜರು

0

ಪುತ್ತೂರು: ಪುತ್ತೂರು ಪಶುಸಂಗೋಪನಾ ಇಲಾಖೆಯ ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ ಕಯ್ಯಾರ ಪುಷ್ಪರಾಜ ಶೆಟ್ಟಿರವರು ಸುಳ್ಯ ಪಶುಸಂಗೋಪನಾ ಇಲಾಖೆಯಿಂದ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಹಿಂದೆ ಪುತ್ತೂರಿನಲ್ಲಿ ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೊನ್ನಪ್ಪ ಗೌಡರವರು ನಿವೃತ್ತಿಗೊಂಡ ಹಿನ್ನಲೆಯಲ್ಲಿ ಅವರ ತೆರವಾದ ಸ್ಥಾನಕ್ಕೆ ಪುಷ್ಪರಾಜ ಶೆಟ್ಟಿರವರು ಆಗಮಿಸಿದ್ದಾರೆ.

ಪುಷ್ಪರಾಜ್ ಶೆಟ್ಟಿರವರು ಪ್ರಾಥಮಿಕ ಪಶುವೈದ್ಯಕೀಯ ಪರೀಕ್ಷಕರಾಗಿ ಕೋಡಿಂಬಾಡಿ, ಹಿರಿಯ ಪಶುವೈದ್ಯಕೀಯ ಪರೀಕ್ಷಕರಾಗಿ ಈಶ್ವರಮಂಗಲ, ಬಳಿಕ ಜಾನುವಾರು ಅಧಿಕಾರಿಯಾಗಿ ಪದೋನ್ನತಿಗೊಂಡು ಪಾಣಾಜೆ, ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ ಪದೋನ್ನತಿಗೊಂಡು ಸುಳ್ಯದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇವರು ಸಾಲ್ಮರ ಹೆಬ್ಬಾರಬೈಲು ನಿವಾಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here