ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತದ ಹಿನ್ನೆಲೆ – ಮಾಣಿಯಲ್ಲಿ ಪೊಲೀಸರಿಂದ ಬ್ಯಾರಿಕೇಡ್ ಅಳವಡಿಕೆ

0

ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನ ಸವಾರರಿಗೆ ಬದಲಿ ವ್ಯವಸ್ಥೆಗೆ ಸೂಚನೆ

ಮಾಣಿ : ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನ ಸವಾರತು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ‌ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ.

ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ‌ ಸಂಚಾರಕ್ಕೆ ಸಮಸ್ಯೆಯಾಗಿದೆ. ಈ ಹಿನ್ನಲೆ ಸಕಲೇಶಪುರ ತೆರಳಿ ಹಾಸನ ಮೂಲಕ ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here