ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಮೀಫ್ ವತಿಯಿಂದ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ

0

ವಿಟ್ಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀಫ್ ವತಿಯಿಂದ ಮಂಗಳೂರು ಯೇನಾಪೋಯ ಶಾಲೆಯ ಸಹಯೋಗದಲ್ಲಿ ಮತ್ತು ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ಇದರ ಪ್ರಾಯೋಜಕತ್ವದಲ್ಲಿ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರ ಕಾರ್ಯಾಗಾರವು ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ನಡೆಯಿತು.

ಬಂಟ್ವಾಳ ಜಂಇಯ್ಯತುಲ್ ಫಲಾಹ್ ಅಧ್ಯಕ್ಷ ರಶೀದ್ ವಿಟ್ಲ ಮಾತನಾಡಿ ಮೀಫ್ ಸಂಸ್ಥೆ ಶಿಕ್ಷಣದ ಮೌಲ್ಯಗಳನ್ನು ತಿಳಿಸಿಕೊಡುವ ಚಿಕ್ಕ ಅವಧಿಯಲ್ಲಿ ಯಶಸ್ಸು ಸಾಧಿಸಿದೆ. ಇಲ್ಲಿ ಸಿಗುವ ಕಾರ್ಯಾಗಾರವನ್ನು ಮೈಗೂಡಿಸಿಕೊಂಡು ಹೋದಾಗ ಯಶಸ್ವಿಯಾಗುತ್ತದೆ. ಡಾ. ಅಬ್ದುಲ್ ಬಶೀರ್ ವಿ.ಕೆ ಅವರು ಗ್ರಾಮೀಣ ಭಾಗದಲ್ಲಿ ಜನಪ್ರಿಯ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ, ಎಲ್ಲರಿಗೂ ಶಿಕ್ಷಣ ಸಿಗುವಂತೆ ಮಾಡಿದ್ದಾರೆ ಎಂದರು.

ಮೀಫ್ ಇದರ ಅಧ್ಯಕ್ಷ ಮೂಸಬ್ಬ ಪಿ. ಬ್ಯಾರಿ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿ ನಿರಂತರವಾಗಿ ಶಿಕ್ಷಕರಿಗೆ ಕಾರ್ಯಾಗಾರ ನಡೆಸಲಾಗುತ್ತಿದೆ. ಬಡ ಮಕ್ಕಳಿಗೂ ಶಿಕ್ಷಣಕ್ಕೆ ಪೂತ್ಸಾಹ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ವಿಧಾನ ಸಭೆಗೆ ಕಲಪ ವೀಕ್ಷಸಲು ಅವಕಾಶ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯವಾಗಿದ್ದು, ಅವುಗಳನ್ನು ಶಿಕ್ಷಕರು ಮಾಡಬೇಕು ಎಂದರು.

ಜನಪ್ರಿಯ ಸೆಂಟ್ರಲ್ ಸ್ಕೂಲ್ ನ ನಿರ್ದೇಶಕ ನೌಶೀನ್ ಬದ್ರಿಯಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತರಬೇತುಗಾರರಾದ ಕೃಷಾ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು.ಜನಪ್ರಿಯ ಸೆಂಟ್ರಲ್ ಸ್ಕೂಲ್ ಪ್ರಾಂಶುಪಾಲ ಲಿಬಿನ್ ಕ್ಸೇವಿಯರ್ , ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್,ಮೀಫ್ ನ ಅಹ್ಮದ್ ಶಾರೀಕ್, ಶೇಖ್ ರಹ್ಮಾತುಲ್ಲಾ, ಅನ್ವರ್ ಗೂಡಿನಬಳಿ, ಸವಾದ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here