ಜು.23: ವಿಟ್ಲ-ಚಂದಳಿಕೆ ಭಾರತ ಅಡಿಟೋರಿಯಂನಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ

0

ಪುತ್ತೂರು: ದ.ಕ.ಗ್ಯಾರೇಜ್ ಮಾಲಕರ ಸಂಘ ಮಂಗಳೂರು (ದ.ಕ.ಮತ್ತು ಉಡುಪಿ ಜಿಲ್ಲೆ) ಇದರ ವಿಟ್ಲ ವಲಯ, ಯಕ್ಷಭಾರತ ಸೇವಾ ಪ್ರತಿಷ್ಠಾನ ಮತ್ತು ಭಾರತ ಅಡಿಟೋರಿಯಂ ಚಂದಳಿಕೆ ವಿಟ್ಲ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಜಿಲ್ಲಾ ವೆನ್‌ಲಾಕ್ ಆಸ್ಪತ್ರೆ ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ ಜು.23ರಂದು ಬೆಳಿಗ್ಗೆ 9.30ರಿಂದ 1ರ ತನಕ ವಿಟ್ಲ-ಚಂದಳಿಕೆ ಭಾರತ ಅಡಿಟೋರಿಯಂನಲ್ಲಿ ನಡೆಯಲಿದೆ.

ಅಡ್ಯನಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿಶ್ವೇಶ್ವರ ವಿ.ಕೆ. ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಲಭ್ಯ ಕನ್ನಡಕಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here