ಕಡಬ: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಆತೂರು ಬದ್ರಿಯಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅನುತೀರ್ಣಗೊಂಡಿದ್ದ ವಿದ್ಯಾರ್ಥಿನಿಯೋರ್ವರು ಜೂನ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-2ರಲ್ಲಿ ಉತ್ತೀರ್ಣಗೊಂಡಿದ್ದು ಇದೀಗ ಸಂಸ್ಥೆಗೆ ಶೇ.100 ಫಲಿತಾಂಶ ಲಭಿಸಿದೆ.
ಮಾರ್ಚ್ ತಿಂಗಳಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗೆ ಸಂಸ್ಥೆಯಿಂದ ಹಾಜರಾದ 30 ವಿದ್ಯಾರ್ಥಿಗಳಲ್ಲಿ 29 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ವಿದ್ಯಾರ್ಥಿನಿಯೋರ್ವಳು ಅನುತೀರ್ಣಗೊಂಡಿದ್ದಳು. ಈಕೆ ಜೂನ್ ತಿಂಗಳಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-೨ ಬರೆದಿದ್ದು ಇದರಲ್ಲಿ ತೇರ್ಗಡೆಗೊಂಡಿದ್ದಾರೆ. ಈ ಮೂಲಕ 2023-24ನೇ ಸಾಲಿನ ಎಸ್. ಎಸ್. ಎಲ್. ಸಿ ವಾರ್ಷಿಕ ಪರೀಕ್ಷೆಯಲ್ಲಿ ಸಂಸ್ಥೆಗೆ ಶೇ.100 ಫಲಿತಾಂಶ ಲಭಿಸಿದೆ ಎಂದು ಸಂಸ್ಥೆಯ ಸಂಚಾಲಕರಾದ ಪಿ.ಆದಂ ಹಾಜಿ ಪಿಲಿಕುಡೇಲು ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.