ನೆಲ್ಯಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ

0

ರಾಹುಲ್ ಗಾಂಧಿ ಅವಮಾನಿಸಿ ವಾಟ್ಸಪ್ ನಲ್ಲಿ ಸ್ಟೇಟಸ್ ಹಾಕಿದ ಆರೋಪ-ಸಿಬ್ಬಂದಿ ವಜಾಗೊಳಿಸಲು ನಿರ್ಣಯ

ನೆಲ್ಯಾಡಿ : ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರನ್ನು ಅವಹೇಳನ ಮಾಡಿರುವ ವಿಡಿಯೋ ವನ್ನು ವಾಟ್ಸಪ್ ಸ್ಟೇಟಸ್ ನಲ್ಲಿ ಹಾಕಿದ ಆರೋಪದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಯನ್ನು ವಜಾಗೊಳಿಸಲು ನೆಲ್ಯಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಭೆ ಜು. 23 ರಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಗ್ರಾಮ ಪಂಚಾಯಿತಿ ಸಿಬ್ಬಂದಿ ಗಿರೀಶ್ ಅವರು ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರನ್ನು ಅವಮಾನಿಸುವ ವಿಡಿಯೋ ವೊಂದನ್ನು ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಹಾಕಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ ಹಾಗೂ ಎನ್ ಎಸ್ ಯು ಐ ಸಂಘಟನೆಯಿಂದ ಗ್ರಾಮ ಪಂಚಾಯಿತಿಗೆ ಬಂದಿರುವ ಅರ್ಜಿ ಯ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಯಿತು.

ಗಿರೀಶ್ ಅವರ ವಿರುದ್ಧ ಇನ್ನಿತರ ಆರೋಪಗಳೂ ಇದ್ದು ಅವರನ್ನು ಕೆಲಸದಿಂದ ವಜಾಗೊಳಿಸುವ ನಿರ್ಣಯ ಕೈಗೊಳ್ಳುವಂತೆ ಅಧ್ಯಕ್ಷ, ಉಪಾಧ್ಯಕ್ಷರು ಸೇರಿ ಏಳು ಸದಸ್ಯರು ಒತ್ತಾಯಿಸಿದರು. ಬಳಿಕ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಆದರೆ ಸಿಬ್ಬಂದಿಯ ಅಭಿಪ್ರಾಯ ಪಡೆಯದೆ ವಜಾಗೊಳಿಸುವುದಕ್ಕೆ ಸಭೆಯಲ್ಲಿದ್ದ ಬಿಜೆಪಿ ಬೆಂಬಲಿತ ನಾಲ್ವರು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.


ಸಭೆಯಲ್ಲಿ ಉಪಾಧ್ಯಕ್ಷೆ ರೇಷ್ಮಾ ಶಶಿ, ಸದಸ್ಯರಾದ ರವಿಪ್ರಸಾದ್ ಶೆಟ್ಟಿ, ಅಬ್ದುಲ್ ಜಬ್ಬಾರ್, ಪ್ರಕಾಶ್ ಪೂಜಾರಿ, ಮಹಮ್ಮದ್ ಇಕ್ಬಾಲ್, ಉಷಾ ಜೋಯಿ, ಚೇತನಾ, ಜಯಂತಿ ಮಾದೇರಿ, ಜಯಲಕ್ಷ್ಮಿಪ್ರಸಾದ್, ಪುಷ್ಪ ಪಡುಬೆಟ್ಟು ಉಪಸ್ಥಿತರಿದ್ದರು. ಪಿಡಿಒ ಮೋಹನ್ ಕುಮಾರ್, ಲೆಕ್ಕ ಸಹಾಯಕ ಅಂಗು ಕಲಾಪ ನಡೆಸಿದರು.

LEAVE A REPLY

Please enter your comment!
Please enter your name here