ಕಡಬ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಭವಿತ್ ರೈ ಬೆಳ್ಳಾರೆ ಠಾಣೆಗೆ ವರ್ಗಾವಣೆ

0

ಕಡಬ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭವಿತ್ ರೈ ಯವರು ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಭವಿತ್ ರೈಯವರು 2011 ರಲ್ಲಿ ಪೋಲಿಸ್ ಇಲಾಖೆಗೆ ನೇಮಕಗೊಂಡಿದ್ದು ವಿಟ್ಲದಲ್ಲಿ 5 ವರ್ಷ ಬಳಿಕ ಕಡಬದಲ್ಲಿ 6 ವರ್ಷ 10 ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಪಾಲ್ತಾಡಿ ಗ್ರಾಮದ ನಡುಕೂಟೇಲು ನಿವಾಸಿಯಾಗಿದ್ದಾರೆ. ಸೌಮ್ಯ ಸ್ವಭಾವದ ವ್ಯಕ್ತಿಯಾಗಿರುವ ಭವಿತ್ ರೈಯವರು ಸಾರ್ವಜನಿಕರೊಂದಿಗೆ ಉತ್ತಮ ನಡವಳಿಕೆ ಹೊಂದಿದ್ದಾರೆ.

LEAVE A REPLY

Please enter your comment!
Please enter your name here