ಬರ್ಚಿನಹಳ್ಳ: ಈಚರ್ ಲಾರಿ-ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ

0

ನೆಲ್ಯಾಡಿ: ಈಚರ್ ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಲಾರಿ ಚಾಲಕ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಜು.23ರಂದು ಸಂಜೆ ನಡೆದಿದೆ.


ಕನಕಪುರದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಈಚರ್ ಲಾರಿ ಮಧ್ಯೆ ಬರ್ಚಿನಹಳ್ಳದಲ್ಲಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ವರದಿಯಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

LEAVE A REPLY

Please enter your comment!
Please enter your name here