ಪುತ್ತೂರು: ಕೆಯ್ಯೂರು ಗ್ರಾಮದ ಬಾಕಿತ್ತಿಮಾರು ಎಂಬಲ್ಲಿ ಮನೆಗೆ ಮರ ಬಿದ್ದು ಹಾನಿಯುಂಟಾದ ಬಗ್ಗೆ ವರದಿಯಾಗಿದೆ. ಬಾಕಿತ್ತಿಮಾರು ಚಂದ್ರಶೇಖರ ಎಂಬವರ ಮನೆಗೆ ಮರ ಬಿದ್ದು ಹಾನಿಯುಂಟಾಗಿದೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕೆಯ್ಯೂರು ಗ್ರಾಪಂ ಅಧ್ಯಕ್ಷ ಶರತ್ ಕುಮಾರ್ ಮಾಡಾವು, ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ, ಗ್ರಾಮ ಆಡಳಿತ ಅಧಿಕಾರಿ ಸ್ವಾತಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.