





ಉಪ್ಪಿನಂಗಡಿ: ಟೀಮ್ ದಕ್ಷಿಣ ಕಾಶಿ ಉಪ್ಪಿನಂಗಡಿ ಇದರ ಐದನೇ ವಾರ್ಷಿಕೋತ್ಸವದ ಪ್ರಯುಕ್ತ ಸಸಿಗಳನ್ನು ನೆಡುವ ‘ವೃಕ್ಷ ಸಮೃದ್ಧಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜು.27ರಂದು ಬೆಳಗ್ಗೆ 10 ಗಂಟೆಗೆ ಹಿರೇಬಂಡಾಡಿ ಸರಕಾರಿ ಪ್ರೌಢ ಶಾಲಾ ವಠಾರದಲ್ಲಿ ಇದಕ್ಕೆ ಚಾಲನೆ ನೀಡಲಾಗುವುದು.


ಮಾಜಿ ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಅತಿಥಿಗಳಾಗಿ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್, ಹಿರೇಬಂಡಾಡಿ ಸರಕಾರಿ ಶಾಲಾ ಮುಖ್ಯೋಪಾಧ್ಯಾಯ ಶ್ರೀಧರ ಭಟ್ ಕೆ., ಎಸ್‌ಡಿಎಂಸಿ ಕಾರ್ಯಾಧ್ಯಕ್ಷ ಸತೀಶ್ ಶೆಟ್ಟಿ ಹೆನ್ನಾಳ, ಅರಣ್ಯಾಧಿಕಾರಿ ಸುಧೀರ್ ಹೆಗ್ಡೆ ಭಾಗವಹಿಸಲಿದ್ದಾರೆ ಎಂದು ಟೀಮ್ ದಕ್ಷಿಣ ಕಾಶಿಯ ಅಧ್ಯಕ್ಷ ಪ್ರಸನ್ನ ಪೆರಿಯಡ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.











