ಪುತ್ತೂರು : ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಪೋಕ್ಸೋ ಕಾಯ್ದೆ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ಅರಿವು ಕಾರ್ಯಕ್ರಮ ಜು.23 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿದ್ದ ಪುತ್ತೂರು ನಗರ ಠಾಣೆಯ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ ಜಿ.ವಿಯವರು ಎರಡು ಕಾಯ್ದೆಯ ಜಾರಿ, ವ್ಯಾಪ್ತಿ ಮತ್ತು ಉಲ್ಲಂಘನೆಗೆ ಆಗುವ ಶಿಕ್ಷೆಯ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿನಿಯರು ಸಾಮಾಜಿಕ ಜಾಲತಾಣಗಳನ್ನು ದುರುಪಯೋಗ ಮಾಡಬಾರದು, ಮಾನವ ಸಂಪನ್ಮೂಲವನ್ನು ಜೀವನದಲ್ಲಿ ಸಾಧನೆ ಮಾಡಲು ಸದುಪಯೋಗ ಪಡಿಸಿಕೊಳ್ಳಬೇಕು ಎಂಬ ಕಿವಿ ಮಾತನ್ನು ಹೇಳಿದರು.
ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರಮೀಳ ಜೆಸ್ಸಿ ಕ್ರಾಸ್ತಾ ವಹಿಸಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಚಿತ್ರಲೇಖ ಕೆ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ಉಪನ್ಯಾಸಕರುಗಳು ಹಾಗೂ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.