ಫಿಲೋಮಿನಾ ಪ.ಪೂ ಕಾಲೇಜಿನಲ್ಲಿ ಮಾದಕ ಮುಕ್ತ ಅಭಿಯಾನ ಮಾಹಿತಿ ಕಾರ್ಯಕ್ರಮ

0


ಪುತ್ತೂರು: ಭಾರತ ಸರಕಾರದ ಸಾಮಾಜಿಕ ನ್ಯಾಯ ಮತ್ತು ಉದ್ಯೋಗ ಸಚಿವಾಲಯದ ಆಯೋಜನೆಯಲ್ಲಿ “ನಶ ಮುಕ್ತ್ ಭಾರತ್ ಅಭಿಯಾನ್” (ಎನ್ಎಂಬಿಎ) ಯನ್ನು ಪುತ್ತೂರಿನ ಪತ್ರಾವೋ ಆಸ್ಪತ್ರೆಯ ತಂಡವು ನಡೆಸುತ್ತಿದ್ದು, ಜು 24 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು  ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರವನ್ನು ನಡೆಸಲಾಯಿತು.


  ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಇಂದಿನ ದಿನಗಳಲ್ಲಿ ಯುವ ಜನಾಂಗ ಹೆಚ್ಚು ಮಾದಕ ವ್ಯಸನಕ್ಕೆ ಒಳಗಾಗುತ್ತಿದೆ. ಇದು ಸಮಾಜ ಮತ್ತು ಕುಟುಂಬದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಈ ಉದ್ದೇಶದಿಂದ ಮಕ್ಕಳಲ್ಲಿ ಮಾದಕ ವಸ್ತುಗಳ ಬಗ್ಗೆ ದೂರವಿದ್ದು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಬಗ್ಗೆ ಅರಿವು ಮೂಡಿಸುವ ಅನಿವಾರ್ಯತೆ ಇದೆ ಎಂದು ಹೇಳಿದರು.  


  ಪತ್ರಾವೋ ಆಸ್ಪತ್ರೆಯ ಸಿಬ್ಬಂದಿ ಜೋನ್ಸನ್ ಜೋಸೆಫ್ ಮಾತನಾಡಿ, ಮಾದಕ ವಸ್ತುಗಳ ಬಳಕೆ ಸಾಮಾನ್ಯವಾಗಿ ಪ್ರಪಂಚಾದ್ಯಂತ ಕಂಡು ಬರುವ ಒಂದು ದೊಡ್ಡ ಪಿಡುಗು. ಮಾದಕ ವಸ್ತುಗಳ ಸೇವನೆಗೆ ಒಳಗಾದರೆ ಅದರಿಂದ ಹೊರಬರುವುದು ಕಷ್ಟಕರ ಎಂದು ಇವುಗಳ ದುಷ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು. ಆಸ್ಪತ್ರೆಯ ಸಿಬ್ಬಂದಿ ಜೀಟ ಡಿ ಸೋಜರವರು ಪತ್ರಾವೋ ಆಸ್ಪತ್ರೆಯಲ್ಲಿ ನಡೆಯುವ ಮದ್ಯವರ್ಜನ  ಶಿಬಿರದ ಬಗ್ಗೆ  ಮಾಹಿತಿಯನ್ನು ನೀಡಿದರು. ಆಸ್ಪತ್ರೆಯ ಸಿಬ್ಬಂದಿ  ಶ್ರೀಪ್ರೀತ  ಸಹಕರಿಸಿದರು.
 ಕಾಲೇಜಿನ  ವಿದ್ಯಾರ್ಥಿಗಳು,ಬೋಧಕ ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಉಪನ್ಯಾಸಕ ಭರತ್ ಕುಮಾರ್ ಎ ಸ್ವಾಗತಿಸಿ, ವಿದ್ಯಾರ್ಥಿ ಅಲನ್  ಜಿತ್ತಿ ವಂದಿಸಿದರು.

LEAVE A REPLY

Please enter your comment!
Please enter your name here