ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ಮಾಸ್ಟರ್ ಪ್ಲಾನ್ ಕಳಪೆ ಗುಣಮಟ್ಟದ ಕಾಂಕ್ರೀಟೀಕರಣ ಕಾಮಗಾರಿ, ಅವೈಜ್ಞಾನಿಕ ಚರಂಡಿ ಕಾಮಗಾರಿಯಾಗಿದೆ ಎಂದು ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಪರಿಶೀಲನೆ ಮಾಡಿದರು.ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ, ಸುಬ್ರಹ್ಮಣ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹರೀಶ್ ಇಂಜಾಡಿ ಅವರು ಕಡಬದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ದೂರು ನೀಡಿದ್ದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ನಡೆಸಿದ ಜನಸಂಪರ್ಕ ಸಭೆಯಲ್ಲಿ ನೀಡಿದ ದೂರಿಗೆ ತಕ್ಷಣ ಸ್ಪಂದಿಸಿದ ಸಚಿವರು ಸ್ಥಳದಲ್ಲೇ ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮೊಹಾಪಾತ್ರ ಮೂಲಕ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ರವರಿಗೆ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದಾರೆ.ರಸ್ತೆ ನಿರ್ಮಾಣಗೊಂಡು ಕೇವಲ ಮೂರು ವರ್ಷಗಳಾಗುವಾಗಲೇ ಅಲ್ಲಲ್ಲಿ ಶಿಥಿಲಗೊಂಡಿದೆ,ಕಳಪೆ ಗುಣಮಟ್ಟದ ಕಾಂಕ್ರೀಟೀಕರಣ ಕಾಮಗಾರಿ ಹಾಗೂ ಅವೈಜ್ಞಾನಿಕ ಚರಂಡಿ ಕಾಮಗಾರಿ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು.
ಸಚಿವರ ಆದೇಶದ ಮೇರೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಕುಮಾರಧಾರದವರೆಗೆ ತೆರಳಿ ಎಲ್ಲೆಲ್ಲಿ ಕಳಪೆ ಯಾಗಿದೆ, ಶಿಥಿಲಗೊಂಡಿದೆ ಹಾಗೂ ರಸ್ತೆ ಸಮಸ್ಯೆ, ಚರಂಡಿಗೆ ಸಮಸ್ಯೆ ಗಳನ್ನು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಸೋಮ. ಬಿ.ಸುಬ್ರಹ್ಮಣ್ಯ ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರರು ಪ್ರಮೋದ್ ಕೆ. ಕೆ,ಗುತ್ತಿಗೆದಾರ ಜಗದೀಶ್ ಪೈ,ದೇವಸ್ಥಾನದ ಇಂಜಿನಿಯರ್ ಉದಯಕುಮಾರ್,
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಇಂಜಾಡಿ,ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಪವನ್, ಸತೀಶ್ ಕುಜುಗೋಡು,ಅಚ್ಚುತ ಗೌಡ,ಲೋಲಾಕ್ಷ ಕೈಕಂಬ,ಮಾಜೀ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಶಿವರಾಮ್ ರೈ,ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.