ಪುಣಚ: ತೋಟಗಾರಿಕೆ ಇಲಾಖೆ ಬಂಟ್ವಾಳ ಹಾಗೂ ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘ ಪುಣಚ ಇವುಗಳ ಜಂಟಿ ಆಶ್ರಯದಲ್ಲಿ ರೈತರಿಗೆ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ, ಅದರ ನಿರ್ವಹಣೆ ಹಾಗೂ ವೈಜ್ಞಾನಿಕ ಬೇಸಾಯ ಕ್ರಮಗಳ ಮಾಹಿತಿ ಕಾರ್ಯಕ್ರಮ ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಜು.25ರಂದು ನಡೆಯಿತು.
ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ ಅಮೈ ದೀಪ ಬೆಳಗಿಸಿ, ಮಾತನಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪುಣಚ ಗ್ರಾ.ಪಂ ಅಧ್ಯಕ್ಷೆ ಬೇಬಿ ಪಟಿಕಲ್ಲು ಸಭಾಧ್ಯಕ್ಷತೆ ವಹಿಸಿ ಮಾತನಾಡಿದರು. ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಭಟ್ ಅಮೈ, ಕೇಪು ಗ್ರಾ.ಪಂ.ಅಧ್ಯಕ್ಷ ರಾಘವ ಮಣಿಯಾಣಿ ಸಾರಡ್ಕ ಸಂದೋರ್ಬೋಚಿತವಾಗಿ ಮಾತನಾಡಿದರು.
ಬೆಳೆ ವಿಮೆ ಕಂಪನಿಯ ಶುಭಂ ಪಲಿವಾಲ್, ತೋಟಗಾರಿಕಾ ಇಲಾಖೆಯ ದಿನೇಶ್, ಸಂಘದ ಉಪಾಧ್ಯಕ್ಷ ಪ್ರೀತಂ ಪೂಂಜ ಅಗ್ರಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಅತಿಥಿ ಸಂಪನ್ಮೂಲ ವ್ಯಕ್ತಿ ವಿಟ್ಲ ಸಿ.ಪಿ.ಸಿ.ಆರ್.ಐ.ನ ವಿಜ್ಞಾನಿ ಡಾIಭವಿಷ್ ಅಡಿಕೆ ಬೆಳೆಯಲ್ಲಿ ಎಲೆಚುಕ್ಕಿ ರೋಗ, ಅದರ ನಿರ್ವಹಣೆ ಹಾಗೂ ವೈಜ್ಞಾನಿಕ ಬೇಸಾಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ತೋಟಗಾರಿಕಾ ಇಲಾಖೆಯು ಅಧಿಕಾರಿ ಪ್ರದೀಪ್ ಅಡಿಕೆ ಹಾಗೂ ಕಾಳು ಮೆಣಸು ಬೆಳೆಗಳಿಗೆ ಬೆಳೆ ವಿಮೆಯ ಯೋಜನೆಯ ಕುರಿತು ಸಮಗ್ರ ಮಾಹಿತಿ ನೀಡಿದರು.
ಪುಣಚ ಹಾಗೂ ಕೇಪು ಭಾಗದ ರೈತರು, ಸಂಘದ ಸದಸ್ಯರು, ನಿರ್ದೇಶಕಕರು ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗ ಸಹಕರಿಸಿದರು.