ಜು.26: ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

0

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸಿಟಿ, ರೋಟರಿ ಕ್ಲಬ್ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಈಸ್ಟ್, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ರೋಟರಿ ಕ್ಲಬ್ ಪುತ್ತೂರು ಎಲೈಟ್, ರೋಟರಿ ಕ್ಲಬ್ ಪುತ್ತೂರು ಯುವ, ರೋಟರಿ ಕ್ಲಬ್ ಪುತ್ತೂರು ಸ್ವರ್ಣ, ರೋಟರಿ ಕ್ಲಬ್ ಬಿರುಮಲೆ ಪುತ್ತೂರು, ಇನ್ನರ್ ವೀಲ್ ಕ್ಲಬ್, ನಿವೃತ್ತ ಸೈನಿಕರ ಸಂಘ ಮತ್ತು ಕೆ.ಎಸ್.ಆರ್.ಟಿ.ಸಿ. ಸಂಸ್ಥೆಯ ಸಹಭಾಗಿತ್ವದಲ್ಲಿ  25ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್ ಆಚರಣೆಯು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜು.26 ರಂದು ಸಂಜೆ ಜರಗಲಿದೆ.

ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಕ ಅಮಲಿಂಗಯ್ಯ ಬಿ.ಹೊಸಪೂಜಾರಿ ಮತ್ತು ಅಂತರ್ರಾಷ್ಟ್ರೀಯ ರೋಟರಿ ಜಿಲ್ಲೆ 3181 ಇದರ ರೋಟರಿ ಆಂಡ್ ಪೇಟ್ರಿಯೋಟಿಸಮ್ ವೈಸ್ ಚೇರ್ಮನ್ ಡಿ.ಎಮ್.ಗೌಡರವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ಮತ್ತು ಹುತಾತ್ಮರಾದ ವೀರ ಯೋಧರ ಆತ್ಮಕ್ಕೆ ಚಿರಶಾಂತಿ ಕೋರಬೇಕಾಗಿ ವಿವಿಧ ಸಂಘ-ಸಂಸ್ಥೆಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here